ಬಜೆಟ್ ಅಧಿವೇಶನದ ನಂತರ ರಾಜೀನಾಮೆ

7

ಬಜೆಟ್ ಅಧಿವೇಶನದ ನಂತರ ರಾಜೀನಾಮೆ

Published:
Updated:

ನಾಗಮಂಗಲ: ‘ಮುಂಬರುವ ಬಜೆಟ್ ಅಧಿವೇಶನದ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅಧಿಕೃತವಾಗಿ ಕಾಂಗ್ರೆಸ್‌ ಸೇರುತ್ತೇನೆ’ ಎಂದು ಶಾಸಕ ಎನ್.ಚಲುವರಾಯಸ್ವಾಮಿ ಇಲ್ಲಿ ಸೋಮವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ ‘ಭಿನ್ನ ಶಾಸಕರೆಲ್ಲರೂ ಜನವರಿ ತಿಂಗಳ ಅಂತ್ಯಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದೆವು. ಆದರೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೇ ಬಜೆಟ್ ಅಧಿವೇಶನದ ನಂತರ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ. ಅವರ ಸೂಚನೆಯಂತೆ ಬಜೆಟ್‌ ಅಧಿವೇಶನ ಮುಗಿದ ನಂತರ ರಾಜೀನಾಮೆ ನೀಡುತ್ತೇವೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry