ಕಾಂಗ್ರೆಸ್‌ನೊಂದಿಗೆ ಮೈತ್ರಿ ನಿರ್ಧಾರ ಕೈಗೊಂಡಿಲ್ಲ: ಸಿಪಿಐ

7

ಕಾಂಗ್ರೆಸ್‌ನೊಂದಿಗೆ ಮೈತ್ರಿ ನಿರ್ಧಾರ ಕೈಗೊಂಡಿಲ್ಲ: ಸಿಪಿಐ

Published:
Updated:

ಹೈದರಾಬಾದ್‌: ಕಾಂಗ್ರೆಸ್‌ ಜತೆ ಚುನಾವಣಾ ಮೈತ್ರಿ ಮಾಡಿಕೊಳ್ಳುವ ಸಂಬಂಧ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಭಾರತೀಯ ಕಮ್ಯೂನಿಷ್ಟ್‌ ಪಕ್ಷ (ಸಿಪಿಐ) ಹೇಳಿದೆ.

ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳದಿರಲು ಸಿಪಿಎಂ ಭಾನುವಾರ ನಿರ್ಧರಿಸಿತ್ತು. ಇದರ ಬೆನ್ನಲ್ಲೇ ಪತ್ರಕರ್ತರೊಂದಿಗೆ ಮಾತನಾಡಿದ ಸಿಪಿಐ ಪ್ರಧಾನ ಕಾರ್ಯದರ್ಶಿ ಎಸ್‌. ಸುಧಾಕರ್‌ ರೆಡ್ಡಿ, ಸಾಮಾನ್ಯವಾಗಿ ಜಾತ್ಯತೀತ ಪಕ್ಷಗಳು ಒಂದೇ ವೇದಿಕೆಯಡಿ ಬರಬೇಕು ಎಂಬುದು ಪಕ್ಷದ ನಿಲುವು. ಆದರೆ, ಚುನಾವಣಾ ಮೈತ್ರಿ ವಿಷಯ ಬೇರೆ ಎಂದರು.

ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ, ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಚರ್ಚೆ ಮಾಡುತ್ತೇವೆ ಎಂದರು.

ಸಿಪಿಎಂ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಪಕ್ಷದ ವೇದಿಕೆಯಲ್ಲಿ ಹಾಗೂ ಆ ಪಕ್ಷದೊಂದಿಗೆ ಚರ್ಚಿಸಲಾಗುವುದು. ದೇಶದಾದ್ಯಂತ ಮೈತ್ರಿ ಮಾಡಿಕೊಳ್ಳುತ್ತೇವೆ ಎಂದು ಭಾವಿಸುವುದು ಕಷ್ಟ. ಸ್ಥಳೀಯವಾಗಿ ಮೈತ್ರಿ ಆಗಬಹುದು ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry