10 ಹಳ್ಳಿಗಳಿಗೆ ಕಾವೇರಿ ನೀರು ಪೂರೈಕೆ

7

10 ಹಳ್ಳಿಗಳಿಗೆ ಕಾವೇರಿ ನೀರು ಪೂರೈಕೆ

Published:
Updated:

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾದ 110 ಹಳ್ಳಿಗಳಿಗೆ ಕಾವೇರಿ ಕುಡಿಯುವ ನೀರು ಪೂರೈಸುವ ಯೋಜನೆಯ ಭಾಗವಾಗಿ 10 ಹಳ್ಳಿಗಳಿಗೆ ನೀರು ಸರಬರಾಜು ಮಾಡಲು ಜಲಮಂಡಳಿ ವ್ಯವಸ್ಥೆ ಕಲ್ಪಿಸಿದೆ.

ಹೇರೋಹಳ್ಳಿ, ವಲ್ಲಭನಗರ, ಸೊನ್ನೇನಹಳ್ಳಿ, ಹೊರಮಾವು, ಸಿದ್ಧಾಪುರ, ದಾಸರಹಳ್ಳಿ, ಚಳ್ಳಕೆರೆ, ಕೂಡ್ಲು, ನಾಗನಾಥಪುರ, ಪರಪ್ಪನ ಅಗ್ರಹಾರ ನಿವಾಸಿಗಳು ಕಾವೇರಿ ನೀರಿನ ಸಂಪರ್ಕ ಪಡೆಯಬಹುದಾಗಿದೆ.

ನಿವಾಸಿಗಳು ಜಲಮಂಡಳಿಗೆ ಸೂಕ್ತ ದಾಖಲೆಗಳನ್ನು ಸಲ್ಲಿಸಬೇಕು ಮತ್ತು ಶುಲ್ಕ ಪಾವತಿಸಬೇಕು. ಆನ್‍ಲೈನ್‍ನಲ್ಲಿ ಸಹ www.bwssb.gov.in ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದು. ಈ ಹಳ್ಳಿಗಳ ವ್ಯಾಪ್ತಿಯ ಜಲಮಂಡಳಿಯ ಕಾರ್ಯನಿರ್ವಾಹಕ ಎಂಜಿನಿಯರ್‌ಗಳನ್ನು ಸಂಪರ್ಕಿಸಬೇಕು ಎಂದು ಜಲಮಂಡಳಿಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ. ಸಂಪರ್ಕ: 080- 22945350.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry