7

ಹೆಸರಘಟ್ಟ ರಸ್ತೆ ಕಾಮಗಾರಿ

Published:
Updated:

ಬೆಂಗಳೂರು: ಹೆಸರಘಟ್ಟದ ಕಡತನಮಲೆ ಗ್ರಾಮದಲ್ಲಿ ₹4.40 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಚಾಲನೆ ನೀಡಿದರು.

ಕಡತನಮಲೆಯಿಂದ ಶಾನುಭೋಗನಹಳ್ಳಿ ಮಾರ್ಗವಾಗಿ ಚೊಕ್ಕನಹಳ್ಳಿಯವರೆಗೆ ರಸ್ತೆಯನ್ನು ವಿಸ್ತರಣೆ ಮಾಡಲಾಗುತ್ತದೆ. ಇದಕ್ಕಾಗಿ ಸ್ವಲ್ಪ ಭೂಮಿ ಸ್ವಾಧೀನ ಪಡಿಸಿಕೊಳ್ಳಬೇಕಿದ್ದು, ಅದಕ್ಕೆ ಗ್ರಾಮಸ್ಥರು ಒಪ್ಪಿಗೆ ಸೂಚಿಸಿರುವುದು ಸಂತಸದ ವಿಷಯ ಎಂದು ವಿಶ್ವನಾಥ್‌ ತಿಳಿಸಿದರು.

ರಸ್ತೆಯಲ್ಲಿ ಗುಂಡಿಗಳು ಬಿದ್ದು ಸಂಪೂರ್ಣ ಹಾಳಾಗಿದೆ. ಹೀಗಾಗಿ, ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.

‘ಕಿರಿದಾದ ರಸ್ತೆಯಿಂದಾಗಿ ವಾಹನಗಳ ಓಡಾಟಕ್ಕೆ ತೊಂದರೆ ಉಂಟಾಗಿತ್ತು. ರಸ್ತೆ ವಿಸ್ತರಣೆಯಿಂದ ರೈತರಿಗೆ ಅನುಕೂಲವಾಗಲಿದೆ. ಇದಕ್ಕಾಗಿ ಜಮೀನು ಬಿಟ್ಟುಕೊಡಲು ನಾವು ಸಿದ್ಧರಿದ್ದೇವೆ’ ಎಂದು ಗ್ರಾಮದ ನಿವಾಸಿ ಸತೀಶ್‌ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry