ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲ್ಹೋತ್ರ, ಜೋಸೆಫ್‌ ಹೆಸರು ಶಿಫಾರಸು

Last Updated 22 ಜನವರಿ 2018, 20:11 IST
ಅಕ್ಷರ ಗಾತ್ರ

ನವದೆಹಲಿ: ಸುಪ್ರೀಂ ಕೋರ್ಟ್‌ನ್ಯಾಯಮೂರ್ತಿಗಳ ಹುದ್ದೆಗೆ ಹಿರಿಯ ವಕೀಲೆ ಇಂದು ಮಲ್ಹೋತ್ರ ಮತ್ತು ಉತ್ತರಾಖಂಡ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಕೆ.ಎಂ. ಜೋಸೆಫ್‌ ಅವರ ಹೆಸರನ್ನು ಕೊಲಿಜಿಯಂ ಶಿಫಾರಸು ಮಾಡಿದೆ.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಕೊಲಿಜಿಯಂ ಇದೇ 11ರಂದು ಈ ಇಬ್ಬರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ.

ಮಿಶ್ರಾ ವಿರುದ್ಧ ಬಂಡಾಯ ಸಾರಿದ್ದ ಸುಪ್ರೀಂ ಕೋರ್ಟ್‌ನ ನಾಲ್ವರು ಹಿರಿಯ ನ್ಯಾಯಮೂರ್ತಿಗಳಾದ ಚೆಲಮೇಶ್ವರ್‌, ರಂಜನ್‌ ಗೊಗೊಯಿ, ಮದನ್‌ ಲೋಕೂರ್‌ ಮತ್ತು ಕುರಿಯನ್‌ ಜೋಸೆಫ್‌ ಕೊಲಿಜಿಯಂನಲ್ಲಿದ್ದಾರೆ.

ಒಂದು ವೇಳೆ ಸರ್ಕಾರ ಶಿಫಾರಸಿಗೆ ಅನುಮೋದನೆ ನೀಡಿದರೆ, ಇಂದು ಮಲ್ಹೋತ್ರ ಅವರು ನೇರವಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕವಾದ ಮೊದಲ ವಕೀಲೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT