‘ಶೌಚಾಲಯ ನಿರ್ಮಾಣ: ಅಧಿಕಾರಿಗಳ ನಿರ್ಲಕ್ಷ್ಯ’

7

‘ಶೌಚಾಲಯ ನಿರ್ಮಾಣ: ಅಧಿಕಾರಿಗಳ ನಿರ್ಲಕ್ಷ್ಯ’

Published:
Updated:

ಯಾದಗಿರಿ: ‘ಇಲ್ಲಿನ ಕೊಳೆಗೇರಿ ಪ್ರದೇಶವಾಗಿರುವ ರಾಜೀವ್‌ಗಾಂಧಿ ನಗರದಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣದಲ್ಲಿ ನಗರಸಭೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ’ ಎಂದು ಬಿಜೆಪಿ ಸ್ಲಂ ಮೋರ್ಚಾ ನಗರ ಘಟಕದ ಅಧ್ಯಕ್ಷ ಸಂತೋಷ ರಾಠೋಡ ಆರೋಪಿಸಿದ್ದಾರೆ.

‘ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ಸೇರಿದಂತೆ ವಿವಿಧ ಯೋಜನೆಗಳ ಅಡಿ ಯಲ್ಲಿ ಕೊಳಚೆ ಪ್ರದೇಶದ ಬಡವರಿಗೆ ವೈಯಕ್ತಿಕ ಶೌಚಾಲಯ ನಿರ್ಮಿಸಿ

ಕೊಳ್ಳಲು ನೆರವು ನೀಡಬೇಕೆಂಬ ನಿಯಮವನ್ನು ಉಲ್ಲಂಘಿಸಿ, ಉದ್ದೇಶ ಪೂರ್ವಕ ವಾಗಿ ಹಣ ನೀಡದೇ ಅಧಿಕಾರಿಗಳು ಯೋಜನೆ ಹಿನ್ನಡೆಗೆ ಕಾರಣವಾಗಿದ್ದಾರೆ’ ಎಂದು ದೂರಿದ್ದಾರೆ.

ರಾಜೀವ್‌ಗಾಂಧಿ ನಗರದಲ್ಲಿ ‘ಈಗಾಗಲೇ ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡಿಕೊಂಡವರಿಗೂ ಹಣ ಬಿಡುಗಡೆ ಮಾಡುತ್ತಿಲ್ಲ. ಬಡವರು ಶೌಚಾಲಯ ನಿರ್ಮಾಣ ಮಾಡಿಕೊಳ್ಳಬೇಕೆಂದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ’ ಎಂದು ಹೇಳಿದ್ದಾರೆ.

‘ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳ್ಳೆಯ ಯೋಜನೆ ಎಎಸ್‌ಬಿಎಂ ಜನರಿಗೆ ತಲುಪದೇ ಹಳ್ಳ ಹಿಡಿಯು ತ್ತಿದ್ದು, ಜಿಲ್ಲಾಧಿಕಾರಿ ಎಚ್ಚೆತ್ತುಕೊಂಡು ನಗರಸಭೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಬೇಕು. ಇಲ್ಲವಾದಲ್ಲಿ ಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry