2019ರ ಲೋಕಸಭಾ ಚುನಾವಣೆ, ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಇಲ್ಲ: ಶಿವಸೇನೆ

7

2019ರ ಲೋಕಸಭಾ ಚುನಾವಣೆ, ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಇಲ್ಲ: ಶಿವಸೇನೆ

Published:
Updated:
2019ರ ಲೋಕಸಭಾ ಚುನಾವಣೆ, ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಇಲ್ಲ: ಶಿವಸೇನೆ

ನವದೆಹಲಿ: ಬಿಜೆಪಿ ಜತೆಗಿನ ಮೈತ್ರಿ ಅಂತ್ಯ ಮಾಡುವುದಾಗಿ ಶಿವಸೇನೆ ಹೇಳಿದೆ. 2019ರಲ್ಲಿ ನಡೆಯಲಿರುವ ಲೋಕಸಭೆ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಚುನಾವಣಾ ಕಣಕ್ಕಿಳಿಯಲು ಶಿವಸೇನೆ ತೀರ್ಮಾನಿಸಿದೆ.

ಮಂಗಳವಾರ ಮುಂಬೈನಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸೇನಾ ಮುಖ್ಯಸ್ಥ ಸಂಜಯ್ ರೌತ್ ಅವರು ಈ ನಿರ್ಣಯ ಮಂಡಿಸಿದ್ದು, ಸದಸ್ಯರಿಂದ ಅನುಮೋದನೆ ಲಭಿಸಿದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗಿಳಿಯಲಿರುವ ಶಿವಸೇನೆ 48 ಸೀಟುಗಳ ಪೈಕಿ 25 ಮತ್ತು ವಿಧಾನಸಭೆ ಚುನಾವಣೆಯಲ್ಲಿ  288 ಸೀಟುಗಳ ಪೈಕಿ 150 ಸೀಟುಗಳನ್ನು ಗೆಲ್ಲುವ ಗುರಿಯನ್ನಿರಿಸಿಕೊಂಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry