ದಲಿತ ಯುವತಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಅಪ್ಪ–ಮಗ

7

ದಲಿತ ಯುವತಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಅಪ್ಪ–ಮಗ

Published:
Updated:
ದಲಿತ ಯುವತಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಅಪ್ಪ–ಮಗ

ಲಾಲ್‌ಗಂಜ್‌(ಉತ್ತರಪ್ರದೇಶ): ಮನೆಯಲ್ಲಿ ಒಬ್ಬಂಟಿಯಾಗಿದ್ದ 19 ವರ್ಷ ವಯಸ್ಸಿನ ದಲಿತ ಯುವತಿಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಇಲ್ಲಿ ನಡೆದಿದೆ.

ಸೋಮವಾರ ಮಿಥೈಲಾಲ್‌ ಎನ್ನುವವರ ಮನೆಗೆ ನುಗ್ಗಿದ ತಂದೆ ಹಾಗೂ ಮಗ, ಮಿಥೈಲಾಲ್‌ ಅವರ ಮಗಳು ಅಂಜು ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ.

ಘಟನೆ ನಡೆದಾಗ ಮನೆಯಲ್ಲಿ ಅಂಜು ಒಬ್ಬರೆ ಇದ್ದರು ಎನ್ನಲಾಗಿದೆ. ‘ಘಟನೆ ಬಳಿಕ ಸಂತ್ರಸ್ತ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮಂಗಳವಾರ ಸಾವಿಗೀಡಾಗಿದ್ದಾಳೆ’ ಎಂದು ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ಇನ್ನೂ ಯಾರೊಬ್ಬರನ್ನು ಬಂಧಿಸಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ತನಿಖೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry