4

ಅತ್ಯಾಚಾರಕ್ಕೆ ಒಳಗಾದ ಯುವತಿಯಿಂದ ಪ್ರಧಾನಿಗೆ ರಕ್ತದಲ್ಲಿ ಪತ್ರ: ನ್ಯಾಯ ಒದಗಿಸುವಂತೆ ಮನವಿ

Published:
Updated:
ಅತ್ಯಾಚಾರಕ್ಕೆ ಒಳಗಾದ ಯುವತಿಯಿಂದ ಪ್ರಧಾನಿಗೆ ರಕ್ತದಲ್ಲಿ ಪತ್ರ: ನ್ಯಾಯ ಒದಗಿಸುವಂತೆ ಮನವಿ

ರಾಯಬರೇಲಿ: ಅತ್ಯಾಚಾರಕ್ಕೆ ಒಳಗಾದ ಯುವತಿಯೊಬ್ಬಳು ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್‌ ಅವರಿಗೆ ರಕ್ತದಲ್ಲಿ ಪತ್ರ ಬರೆದು ತನಗೆ ನ್ಯಾಯ ಒದಗಿಸುವಂತೆ ಕೋರಿದ್ದಾಳೆ.

‘ಪ್ರಭಾವಿ ವ್ಯಕ್ತಿಗಳ ಜತೆ ಸಂಪರ್ಕ ಹೊಂದಿರುವುದರಿಂದ ಆರೋಪಿಗಳ ವಿರುದ್ಧ ಪೊಲೀಸರು ಕ್ರಮಕೈಗೊಳ್ಳುತ್ತಿಲ್ಲ. ಪ್ರಕರಣವನ್ನು ವಾಪಸ್‌ ಪಡೆಯುವಂತೆ ನನ್ನ ಮೇಲೆ ಒತ್ತಡ ಹೇರುತ್ತಿದ್ದಾರೆ. ನನಗೆ ನ್ಯಾಯ ಒದಗಿಸಬೇಕು ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಯುವತಿ ಪತ್ರದಲ್ಲಿ ಬರೆದಿದ್ದಾಳೆ.

ಯುವತಿ ತಂದೆ ನೀಡಿದ ದೂರಿನ ಮೇರೆಗೆ ಆರೋಪಿಗಳ ವಿರುದ್ಧ 2017ರ ಮಾರ್ಚ್‌ 24ರಂದು ಅಂಕಿತ್‌ ವರ್ಮಾ ಮತ್ತು ದಿವ್ಯಾ ಪಾಂಡೆ ಎನ್ನುವವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಶಶಿ ಶೇಖರ್‌ ತಿಳಿಸಿದ್ದಾರೆ.

‘ಎಂಜಿನಿಯರಿಂಗ್‌ ವಿದ್ಯಾರ್ಥಿಯಾಗಿರುವ ನನ್ನ ಮಗಳ ಮೇಲೆ ಇಬ್ಬರು ಅತ್ಯಾಚಾರವೆಸಗಿದ್ದಾರೆ. ಬಳಿಕ, ಬ್ಲ್ಯಾಕ್‌ಮೇಲ್‌ ಮಾಡಲು ಆರಂಭಿಸಿದ್ದಾರೆ. ಜತೆಗೆ ಯಾರದೋ ಹೆಸರಿನಲ್ಲಿರುವ ಫೇಸ್‌ಬುಕ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ಹಾಕಲಾಗಿದೆ ಎಂದು ಯುವತಿ ತಂದೆ ದೂರಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry