ವಿಶ್ವ ಆರ್ಥಿಕ ವೇದಿಕೆಯಲ್ಲಿ ಪ್ರಧಾನಿ ಮೋದಿ ಭಾಷಣ

7

ವಿಶ್ವ ಆರ್ಥಿಕ ವೇದಿಕೆಯಲ್ಲಿ ಪ್ರಧಾನಿ ಮೋದಿ ಭಾಷಣ

Published:
Updated:
ವಿಶ್ವ ಆರ್ಥಿಕ ವೇದಿಕೆಯಲ್ಲಿ ಪ್ರಧಾನಿ ಮೋದಿ ಭಾಷಣ

ದಾವೋಸ್‌ (ಸ್ವಿಟ್ಜರ್ಲೆಂಡ್‌): ವಿಶ್ವ ಆರ್ಥಿಕ ವೇದಿಕೆ (ಡಬ್ಲ್ಯುಇಎಫ್‌)ಯ 48ನೇ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಜಾಗತಿಕ ನಾಯಕರನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ.

ಇಂದು ಆರಂಭವಾಗಿರುವ ಸಮಾವೇಶದಲ್ಲಿ ಪ್ರಧಾನಿ ಮೋದಿ ಜಾಗತಿಕ ಸವಾಲುಗಳು, ಭಾರತದ ಕೈಗೊಂಡಿರುವ ಕ್ರಮಗಳು ಹಾಗೂ ಭಾರತದಲ್ಲಿ ಹೂಡಿಕೆ ಮತ್ತು ವಹಿವಾಟಿಗೆ ಇರುವ ಅವಕಾಶಗಳ ಬಗ್ಗೆ ವಿಶ್ವ ನಾಯಕರಿಗೆ ಮನವರಿಕೆ ಮಾಡಿದರು.

‘ವಸುಧೈವ ಕುಟುಂಬಕಂ’ -ಇಡೀ ವಿಶ್ವವೇ ಒಂದು ಕುಟುಂಬ–ಎಂಬ ಧ್ಯೇಯ ವಾಕ್ಯದಲ್ಲಿ ಭಾರತ ಸದಾ ನಂಬಿಕೆ ಹೊಂದಿದೆ. ಜಗತ್ತಿನಲ್ಲಿ ಉದ್ಭವಿಸಿರುವ ಒಡಕು ನಿವಾರಣೆಗೆ ಮತ್ತು ಸಮನ್ವಯತೆ ಮೂಡಿಸುವಲ್ಲಿ ಸಹಕಾರಿ ಎಂದರು.

1997ರಲ್ಲಿ ಆಗಿನ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ದಾವೋಸ್‌ನ ಸಮಾವೇಶದಲ್ಲಿ ಭಾಗಿಯಾಗಿದ್ದರು. ಆಗ ದೇಶದ ಜಿಡಿಪಿ 400 ಶತಕೋಟಿ ಡಾಲರ್‌ಗಿಂತ ಸ್ವಲ್ಪ ಹೆಚ್ಚಿನದಾಗಿತ್ತು. ಈಗ ಅದರ ಆರು ಪಟ್ಟು ಹೆಚ್ಚಿದೆ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry