ಕಾಶ್ಮೀರ ವಿವಾದದಲ್ಲಿ ಮಧ್ಯಸ್ಥಿಕೆ ಇಲ್ಲ: ವಿಶ್ವಸಂಸ್ಥೆ

7

ಕಾಶ್ಮೀರ ವಿವಾದದಲ್ಲಿ ಮಧ್ಯಸ್ಥಿಕೆ ಇಲ್ಲ: ವಿಶ್ವಸಂಸ್ಥೆ

Published:
Updated:
ಕಾಶ್ಮೀರ ವಿವಾದದಲ್ಲಿ ಮಧ್ಯಸ್ಥಿಕೆ ಇಲ್ಲ: ವಿಶ್ವಸಂಸ್ಥೆ

ವಿಶ್ವಸಂಸ್ಥೆ: ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಒಪ್ಪಿಗೆ ನೀಡದಿದ್ದರೆ ಕಾಶ್ಮೀರ ವಿವಾದವನ್ನು ಬಗೆಹರಿಸಲು ತಾನು ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ವಿಶ್ವ ಸಂಸ್ಥೆ ಹೇಳಿದೆ.

ಗಡಿಯಲ್ಲಿ ಉಂಟಾಗಿರುವ ಉದ್ವಿಗ್ನ ವಾತಾವರಣವನ್ನು  ಭಾರತ ಹಾಗೂ ಪಾಕಿಸ್ತಾನ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ.

‘ಈ ಎರಡೂ ದೇಶಗಳ ಗಡಿಯಲ್ಲಿ ಕಳೆದ ಹತ್ತು ದಿನಗಳಿಂದ ಇರುವ ಉದ್ವಿಗ್ನ ಪರಿಸ್ಥಿತಿಯ ಬಗ್ಗೆ ಉಲ್ಲೇಖಿಸಿದ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಗಳ ವಕ್ತಾರ ಸ್ಟೀಫನ್ ಡುವಾರಾರಿಕ್, 'ಹತ್ತು ದಿನದಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಈ ವಿಚಾರದ ಬಗ್ಗೆ ನಾನು ನಿರ್ದಿಷ್ಟವಾಗಿ ಮಾತನಾಡುವುದಿಲ್ಲ. ಉತ್ತಮ ವಿಚಾರಗಳು ಇದ್ದಲ್ಲಿ, ಜಾಗತಿಕ ವಿವಾದಗಳ ಪರಿಹಾರಕ್ಕೆ ಮಧ್ಯಸ್ಥಿಕೆ ವಹಿಸಲು ವಿಶ್ವಸಂಸ್ಥೆ ಸದಾ ಸಿದ್ದವಿರುತ್ತದೆ. ಆದರೆ ಎರಡೂ ದೇಶಗಳು ಇದಕ್ಕೆ ಒಪ್ಪಿಕೊಳ್ಳಬೇಕಿದೆ’ ಎಂದಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧಗಳು ದಿನ ದಿನಕ್ಕೆ ಹದಗೆಡುತ್ತಿದೆ. ಕದನ ವಿರಾಮದ ಉಲ್ಲಂಘನೆ ಹಾಗೂ ಸರಣಿ ದಾಳಿಯಿಂದಾಗಿ ಎರಡೂ ಕಡೆಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ. ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸುವಲ್ಲಿ ಯಾವುದೇ ತೃತೀಯ ಶಕ್ತಿಗಳ ಹಸ್ತಕ್ಷೇಪವನ್ನು ಭಾರತ ವಿರೋಧಿಸುತ್ತಿದೆ. ಆದರೆ ಪಾಕಿಸ್ತಾನವು ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ವಿಶ್ವಸಂಸ್ಥೆಯ ಮಧ್ಯಸ್ಥಿಕೆ ಬಯಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry