ಆರ್‌ಟಿಇ ಶುಲ್ಕ: ಗೊಂದಲ ನಿವಾರಣೆಗೆ ಕ್ರಮ

7

ಆರ್‌ಟಿಇ ಶುಲ್ಕ: ಗೊಂದಲ ನಿವಾರಣೆಗೆ ಕ್ರಮ

Published:
Updated:

ಬೆಂಗಳೂರು: ಕಡ್ಡಾಯ ಶಿಕ್ಷಣ ಹಕ್ಕು(ಆರ್‌.ಟಿ.ಇ) ಯೋಜನೆಯಡಿ ಖಾಸಗಿ ಶಾಲೆಗಳಿಗೆ ಶುಲ್ಕ ಮರುಪಾವತಿಯಲ್ಲಿ ಉಂಟಾಗಿರುವ ಗೊಂದಲ ನಿವಾರಿಸಲು ತಂತ್ರಾಂಶದಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್‌ ಸೇಠ್‌ ತಿಳಿಸಿದ್ದಾರೆ.

ಸಾಕಷ್ಟು ಖಾಸಗಿ ಅನುದಾನಿತ ಶಾಲೆಗಳಿಗೆ ಶುಲ್ಕ ಮರುಪಾವತಿ ಆಗದಿರುವ ವಿಚಾರ ಗಮನಕ್ಕೆ ಬಂದಿದೆ. ಇದನ್ನು ನಿವಾರಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದು, ಈ ಸಂಬಂಧ ಕಾರ್ಯ ಪ್ರವೃತ್ತರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚನೆಯನ್ನೂ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry