ವಿಕ್ ಆನ್ ಜೀ, ನೆದರ್ಲೆಂಡ್ಸ್: ಭಾರತದ ವಿಶ್ವನಾಥನ್ ಆನಂದ್ ಇಲ್ಲಿ ನಡೆಯುತ್ತಿರುವ ಟಾಟಾ ಸ್ಟೀಲ್ ಮಾಸ್ಟರ್ಸ್ ಚೆಸ್ ಟೂರ್ನಿಯ ಒಂಬತ್ತನೇ ಸುತ್ತಿನಲ್ಲಿ ನಾರ್ವೆಯ ಮ್ಯಾಗ್ನಸ್ ಕಾರ್ಲ್ಸನ್ ಎದುರು ಆಡಲಿದ್ದಾರೆ.
ವಿಶ್ವ ರ್ಯಾಂಕಿಂಗ್ನಲ್ಲಿ ಕಾರ್ಲ್ಸನ್ ಅಗ್ರಸ್ಥಾನದಲ್ಲಿ ಇದ್ದಾರೆ. ನಾರ್ವೆಯ ಆಟಗಾರನ ಎದುರು ಸೋತಿದ್ದ ಆನಂದ್ ವಿಶ್ವ ಚೆಸ್ ಚಾಂಪಿಯನ್ ಪಟ್ಟವನ್ನು ಕಳೆದುಕೊಂಡಿದ್ದರು.
ಎರಡು ಪಂದ್ಯದಲ್ಲಿ ಗೆಲುವು, ಒಂದರಲ್ಲಿ ಸೋಲು ಹಾಗೂ ಐದರಲ್ಲಿ ಡ್ರಾ ಮಾಡಿಕೊಂಡಿರುವ ಆನಂದ್ ಆರನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ.