ಎಎಪಿ: ಹೈಕೋರ್ಟ್‌ ಮೊರೆ ಹೋದ ಅನರ್ಹ ಶಾಸಕರು

7

ಎಎಪಿ: ಹೈಕೋರ್ಟ್‌ ಮೊರೆ ಹೋದ ಅನರ್ಹ ಶಾಸಕರು

Published:
Updated:

ನವದೆಹಲಿ: ಲಾಭದಾಯಕ ಹುದ್ದೆ ಹೊಂದಿದ ಪ್ರಕರಣದಲ್ಲಿ ತಮ್ಮನ್ನು ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ಆಮ್‌ ಆದ್ಮಿ ಪಕ್ಷದ 20 ಶಾಸಕರು ದೆಹಲಿ ಹೈಕೋರ್ಟ್‌ನಲ್ಲಿ ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ.

ತುರ್ತಾಗಿ ಈ ಪ್ರಕರಣದ ವಿಚಾರಣೆ ನಡೆಸಬೇಕು. ಜತೆಗೆ ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ರಾಷ್ಟ್ರಪತಿ ಅವರು ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದರು.

ನ್ಯಾಯಮೂರ್ತಿಗಳಾದ ಎಸ್‌. ರವೀಂದ್ರ ಭಟ್‌ ಮತ್ತು ಎ.ಕೆ. ಚಾವ್ಲಾ ಅವರನ್ನೊಳಗೊಂಡ ಪೀಠ ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ನಿಗದಿ

ಪಡಿಸಿತು. ಶಾಸಕತ್ವದಿಂದ ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಮಾಡಿದ್ದ ಶಿಫಾರಸಿಗೆ ತಡೆ ನೀಡಬೇಕು ಎಂದು ಶುಕ್ರವಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಈ ಶಾಸಕರು ಸೋಮವಾರ ವಾಪಸ್‌ ಪಡೆದಿದ್ದರು.

ರಾವತ್‌ ವಿರುದ್ಧ ಆಪ್‌ ವಾಗ್ದಾಳಿ

ನವದೆಹಲಿ:
ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಒ.ಪಿ. ರಾವತ್‌ ವಿರುದ್ಧ ಆಮ್‌ ಆದ್ಮಿ ಪಕ್ಷ ವಾಗ್ದಾಳಿ ನಡೆಸಿದೆ.

ಲಾಭದಾಯಕ ಹುದ್ದೆಗೆ ಸಂಬಂಧಿಸಿ ಕಳೆದ ವರ್ಷ ಸೆ. 28 ಮತ್ತು ನ.2ರಂದು ನೋಟಿಸ್‌ ಕಳುಹಿಸಿದ್ದರೂ ಆಮ್‌ ಆದ್ಮಿ ಪಕ್ಷ  ವಿಚಾರಣೆಗೆ ಕೋರಲಿಲ್ಲ ಎಂದು ರಾವತ್‌ ಅವರು ಸಂದರ್ಶನವೊಂದರಲ್ಲಿ ನೀಡಿರುವ ಹೇಳಿಕೆ ಅಪ್ಪಟ ಸುಳ್ಳು ಎಂದು ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry