ಖಾಸಗಿ ಶಾಲೆಗಳಿಗೆ ನಾಳೆ ರಜೆ

7

ಖಾಸಗಿ ಶಾಲೆಗಳಿಗೆ ನಾಳೆ ರಜೆ

Published:
Updated:
ಖಾಸಗಿ ಶಾಲೆಗಳಿಗೆ ನಾಳೆ ರಜೆ

ಬೆಂಗಳೂರು: ಕನ್ನಡ ಸಂಘಟನೆಗಳು ಇದೇ 25 ರಂದು ‘ಕರ್ನಾಟಕ ಬಂದ್‌’ಗೆ ಕರೆ ನೀಡಿರುವ ಕಾರಣ ಶಾಲೆಗಳಿಗೆ ರಜೆ ನೀಡಲು ಕೆಲವು ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ನಿರ್ಧರಿಸಿವೆ.

ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆ ನೀಡಲು ನಿರ್ಧರಿಸಿರುವುದಾಗಿ ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆಡಳಿತ ಮಂಡಳಿಗಳ ಸಂಘ (ಕೆಎಎಂಎಸ್‌) ತಿಳಿಸಿದೆ.

‘ಪರಿಸ್ಥಿತಿ ನೋಡಿನಿರ್ಧಾರ ತೆಗೆದುಕೊಳ್ಳಲು ಶಾಲೆಗಳಿಗೆ ಸೂಚಿಸಲಾಗಿದೆ’ ಎಂದು ಸಿಬಿಎಸ್‌ಇ ಶಾಲೆಗಳ ಆಡಳಿತ ಮಂಡಳಿಗಳ ಸಂಘದ ಮನ್ಸೂರ್‌ ಖಾನ್‌ ತಿಳಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ರಜೆ ನೀಡುವ ಸಂಬಂಧ ನಿರ್ಧಾರ ತೆಗೆದುಕೊಂಡಿಲ್ಲ ಜಿಲ್ಲಾಧಿಕಾರಿ ವಿ.ಶಂಕರ್‌ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry