ಜೆಡಿಎಸ್‌ ಶಾಸಕರ ರಾಜೀನಾಮೆ ಅಂಗೀಕಾರ

7

ಜೆಡಿಎಸ್‌ ಶಾಸಕರ ರಾಜೀನಾಮೆ ಅಂಗೀಕಾರ

Published:
Updated:

ಬೆಂಗಳೂರು: ಜೆಡಿಎಸ್‌ ಶಾಸಕರಾದ ಮಾನಪ್ಪ ವಜ್ಜಲ್ (ಲಿಂಗಸುಗೂರು) ಮತ್ತು ಡಾ. ಶಿವರಾಜ ಪಾಟೀಲ (ರಾಯಚೂರು ನಗರ) ಅವರು ನೀಡಿದ್ದ ರಾಜೀನಾಮೆಯನ್ನು ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಮಂಗಳವಾರ ಅಂಗೀಕರಿಸಿದ್ದಾರೆ.

ರಾಜೀನಾಮೆ ಅಂಗೀಕಾರಗೊಳ್ಳುವ ಮೊದಲೇ ಈ ಇಬ್ಬರೂ ಶಾಸಕರು ಬಿಜೆಪಿ ಸೇರಿರುವುದರಿಂದ ಪಕ್ಷಾಂತರ ನಿಷೇಧ ಕಾಯ್ದೆ ಪ್ರಕಾರ ಕ್ರಮಕೈಗೊಳ್ಳುವಂತೆ ಜೆಡಿಎಸ್ ಮುಖಂಡರು ನೀಡಿದ್ದ ದೂರಿನ ವಿಚಾರಣೆಯನ್ನು ಕೋಳಿವಾಡ ಕಾಯ್ದಿರಿಸಿದ್ದಾರೆ.

ವಿಧಾನಸಭಾಧ್ಯಕ್ಷರ ಅನುಪಸ್ಥಿತಿಯಲ್ಲಿ ಇವರು ವಿಧಾನಸಭಾ ಕಾರ್ಯದರ್ಶಿಗೆ ಇದೇ 18ರಂದು ರಾಜೀನಾಮೆ ಪತ್ರ ಸಲ್ಲಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry