‘10 ವರ್ಷಗಳ ನಂತರ ಸಿ.ಎಂ ಸ್ಥಾನಕ್ಕೆ ಬೇಡಿಕೆ’

7

‘10 ವರ್ಷಗಳ ನಂತರ ಸಿ.ಎಂ ಸ್ಥಾನಕ್ಕೆ ಬೇಡಿಕೆ’

Published:
Updated:

ಬೆಳಗಾವಿ: ಹತ್ತು ವರ್ಷಗಳ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಮಂಡಿಸುವುದಾಗಿ ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ ಮಂಗಳವಾರ ಇಲ್ಲಿ ತಿಳಿಸಿದರು.

ಇಲ್ಲಿನ ತಮ್ಮ ನಿವಾಸದಲ್ಲಿ ಅವರು ಸುದ್ದಿಗಾರರ ಜೊತೆ ಮಾತನಾಡಿದರು. ‘ರಾಜ್ಯದೆಲ್ಲೆಡೆ ಪಕ್ಷ ಸಂಘಟನೆ ಮಾಡಲು ಆರಂಭಿಸಿದ್ದೇನೆ. ಮುಂದಿನ ದಿನಗಳಲ್ಲಿ ಒಂದು ಹಂತಕ್ಕೆ ಬರಲಿದೆ. ಮುಖ್ಯಮಂತ್ರಿ ಹುದ್ದೆಗೇರಲು ನಾನು ಯಾವುದೇ ಶಾರ್ಟ್‌ ಕಟ್‌ ತೆಗೆದುಕೊಳ್ಳುವುದಿಲ್ಲ. ಈ ಸಲ ಯಾರು ಮುಖ್ಯಮಂತ್ರಿ ಆಗಲಿದ್ದಾರೆ ಎಂಬುದರ ಬಗ್ಗೆಯೂ ತಲೆಕೆಡಿಸಿಕೊಂಡಿಲ್ಲ’ ಎಂದು ಅವರು ಹೇಳಿದರು.

‘ನನ್ನ ಬೆಂಬಲಿಗರಿಗೆ ಟಿಕೆಟ್‌ ತಪ್ಪಿಸುವ ಪ್ರಯತ್ನ ಜಿಲ್ಲಾ ಮಟ್ಟದಲ್ಲಿ ನಡೆದಿದೆ. ಹೀಗಾಗಿ ಜಿಲ್ಲಾ ಮಟ್ಟದ ಕಾಂಗ್ರೆಸ್‌ ಬಗ್ಗೆ ಮಾತ್ರ ನನಗೆ ಅಸಮಾಧಾನವಿದೆ. ಉಳಿದಂತೆ ರಾಜ್ಯ ಮಟ್ಟದ ನಾಯಕರ ಬಗ್ಗೆ ಅಸಮಾಧಾನವಿಲ್ಲ. ಕಾಂಗ್ರೆಸ್‌ ಬಿಡುವ ಪ್ರಶ್ನೆಯೇ ಇಲ್ಲ. ಜೆಡಿಎಸ್‌ ಸೇರುವ ಯೋಚನೆಯೂ ಇಲ್ಲ’ ಎಂದರು. ‘ಅಧಿಕಾರಕ್ಕಾಗಿ ಪಕ್ಷಾಂತರ ಮಾಡುವ ವ್ಯಕ್ತಿ ನಾನಲ್ಲ’ ಎಂದು ಸ್ಪಷ್ಟಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry