ಬಿಬಿಎಂಪಿ ಸದಸ್ಯೆ ಮಹದೇವಮ್ಮ

7

ಬಿಬಿಎಂಪಿ ಸದಸ್ಯೆ ಮಹದೇವಮ್ಮ

Published:
Updated:
ಬಿಬಿಎಂಪಿ ಸದಸ್ಯೆ ಮಹದೇವಮ್ಮ

ಬೆಂಗಳೂರು: ಬಿಬಿಎಂಪಿ ಸದಸ್ಯೆ ಮಹದೇವಮ್ಮ ನಾಗರಾಜ್ (44) ಹೃದಯಾಘಾತದಿಂದ ಮಂಗಳವಾರ ಬೆಳಗಿನ ಜಾವ ನಿಧನರಾದರು.

ಗಾಂಧಿನಗರದ ಬಿನ್ನಿಪೇಟೆ ವಾರ್ಡ್‌–122 ಅನ್ನು ಪ್ರತಿನಿಧಿಸುತ್ತಿದ್ದರು. ಅವರಿಗೆ ಪತಿ ಕಾಂಗ್ರೆಸ್‌ ಮುಖಂಡ ನಾಗರಾಜ್‌, ಪುತ್ರ ಮತ್ತು ಪುತ್ರಿ ಇದ್ದಾರೆ. 2000ರಲ್ಲಿ ಮೊದಲ ಬಾರಿಗೆ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. 2015ರಲ್ಲಿ ಮತ್ತೆ ಆಯ್ಕೆಯಾಗಿದ್ದು, ಈಗ ತೋಟಗಾರಿಕೆ ಸ್ಥಾಯಿ ಸಮಿತಿ ಸದಸ್ಯರಾಗಿದ್ದರು.

ಕೆ.ಪಿ.ಅಗ್ರಹಾರದ ಭುವನೇಶ್ವರಿ ನಗರದಲ್ಲಿರುವ ಸ್ವಗೃಹದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಬುಧವಾರ ಬೆಳಿಗ್ಗೆ 11 ಗಂಟೆಗೆ ಚಾಮರಾಜಪೇಟೆಯ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry