ರಾಜ್ಯ ಸರ್ಕಾರ ಮಾಡಿದ್ದು ಬರೀ ಭ್ರಷ್ಟಾಚಾರ

7

ರಾಜ್ಯ ಸರ್ಕಾರ ಮಾಡಿದ್ದು ಬರೀ ಭ್ರಷ್ಟಾಚಾರ

Published:
Updated:

ಉಡುಪಿ: ಅಹಿಂದದ ಪರ ಎಂದು ಘೋಷಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇವಲ ಭ್ರಷ್ಟಾಚಾರ ಮಾಡಿದರೇ ವಿನಾ ಬೇರೇನೂ ಮಾಡಲಿಲ್ಲ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಟೀಕಿಸಿದರು.

ನಗರದಲ್ಲಿ ಮಂಗಳವಾರ ನಡೆದ ಬಿಜೆಪಿ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು. ಭ್ರಷ್ಟಾಚಾರದಲ್ಲಿ ತೊಡಗಿರುವ ರಾಜ್ಯ ಸರ್ಕಾರ ಪ್ರಾಮಾಣಿಕ ಅಧಿಕಾರಿಗಳಿಗೆ ಕೆಲಸ ಮಾಡಲು ಬಿಡುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ವರ್ಗಾವಣೆ ಮಾಡಿದೆ. ಹಾಸನದ ಜಿಲ್ಲಾಧಿಕಾರಿಯನ್ನೂ ವರ್ಗಾವಣೆ ಮಾಡಲಾಗಿದೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಹಾಗೂ ಆರ್‌ಎಸ್‌ಎಸ್ ಸಂಘಟನೆಯ ಕಾರ್ಯಕರ್ತರ ಕೊಲೆ ಮಾಡಿದ ಆರೋಪ ಹೊತ್ತಿರುವ ಎಸ್‌ಡಿಪಿಐ, ಪಿಎಫ್‌ಐ, ಕೆಎಫ್‌ಡಿ ಸಂಘಟನೆಯವರ ಮೇಲಿದ್ದ ಮೊಕದ್ದಮೆ ಗಳನ್ನು ಸರ್ಕಾರ ಹಿಂದಕ್ಕೆ ಪಡೆದಿತ್ತು. ಹಿಂದೂಗಳ ಕೊಲೆ ಹೆಚ್ಚಾಗಲು ಇದು ಸಹ ಒಂದು ಕಾರಣ. ಅಲ್ಲದೆ, ತೀವ್ರಗಾಮಿ ಸಂಘಟನೆಗಳೊಂದಿಗೆ ಅವರು ಹೊಂದಾಣಿಕೆ ಮಾಡಿಕೊಳ್ಳು ತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಉಡುಪಿ ಜಿಲ್ಲೆಯ ಸಮಸ್ಯೆಗಳನ್ನು ಸಹ ಪ್ರಸ್ತಾಪಿಸಿದ ಅವರು, ‘ಜಿಲ್ಲೆಯಲ್ಲಿ ಮರಳುಗಾರಿಕೆ ಸ್ಥಗಿತಗೊಂಡಿದ್ದ ಪರಿಣಾಮ ಸುಮಾರು 2 ವರ್ಷಗಳ ಕಾಲ ನಿರ್ಮಾಣ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಈ ಹಿಂದೆ ಸ್ವರ್ಣ ಜಲಾಶಯದ ನೀರನ್ನು ರೈತರು ಬಳಸುತ್ತಿದ್ದರು. ಆದರೆ, ಈಗ ನೀರು ನೀಡದೆ ರೈತರ ವಿರೋಧಿ ನೀತಿ ಪ್ರದರ್ಶಿಸುತ್ತಿದೆ. ಪಶ್ಚಿಮ ಘಟ್ಟದಲ್ಲಿ ಮನೆ ನಿರ್ಮಾಣ ಮಾಡಲು, ಮೂಲಸೌಕರ್ಯ ಕಲ್ಪಿಸಿಕೊಳ್ಳಲು ಯಾವುದೇ ನಿರ್ಬಂಧ ಇಲ್ಲ. ಆದರೆ, ಈ ವಿಷಯವನ್ನು ಜನರಿಗೆ ತಲುಪಿಸುವಲ್ಲಿ ಸರ್ಕಾರ ವಿಫಲವಾಗಿದೆ’ ಎಂದರು.

ಸಂಸದರಾದ ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲ್, ಶಾಸಕ ಸುನಿಲ್ ಕುಮಾರ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ. ಉದಯ್ ಕುಮಾರ್ ಶೆಟ್ಟಿ, ಕಾರ್ಯ ದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮುಖಂಡ ಕುಯಿಲಾಡಿ ಸುರೇಶ್ ನಾಯಕ್ ಇದ್ದರು.

* * 

ಮರಳು ಮಾಫಿಯಾದ ಒತ್ತಡಕ್ಕೆ ಒಳಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಪ್ರಕಾಶ್ ಜಾವಡೇಕರ್ ಕೇಂದ್ರ ಸಚಿವ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry