ಸ್ವಉದ್ಯೋಗದಿಂದ ಭವಿಷ್ಯ ರೂಪಿಸಿಕೊಳ್ಳಿ

7

ಸ್ವಉದ್ಯೋಗದಿಂದ ಭವಿಷ್ಯ ರೂಪಿಸಿಕೊಳ್ಳಿ

Published:
Updated:

ಕುಶಾಲನಗರ: ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮುಗಿದ ನಂತರ ಸರ್ಕಾರಿ ಉದ್ಯೋಗಕ್ಕಾಗಿ ಕಾಯುವ ಬದಲು ಸರ್ಕಾರದಿಂದ ಸಿಗುವ ಸಾಲ ಸೌಲಭ್ಯ ಪಡೆದು ಸ್ವ ಉದ್ಯೋಗ ಕೈಗೊಳ್ಳಬೇಕು ಎಂದು ಸಿಂಡಿಕೇಟ್ ಬ್ಯಾಂಕ್‌ ನಿವೃತ್ತ ವ್ಯವಸ್ಥಾಪಕ ಎಚ್.ಎಸ್.ಕೃಷ್ಣಮೂರ್ತಿ ಸಲಹೆ ನೀಡಿದರು.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಮಡಿಕೇರಿಯ ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ವತಿಯಿಂದ ಕಾವೇರಿ ಭವನದಲ್ಲಿ ಮಂಗಳವಾರ ನಡೆದ ಅಂತಿಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಗಳಿಗಾಗಿ ನಡೆದ ಒಂದು ದಿನದ ಕೈಗಾರಿಕಾ ಜಾಗೃತಿ ಶಿಬಿರದಲ್ಲಿ ಅವರು ಮಾತನಾಡಿದರು.

ಸ್ವಂತ ಬಂಡವಾಳದಿಂದ ಕೈಗಾರಿಕೆಗಳನ್ನು ಆರಂಭಿಸಿ ಬಡತನ ಮತ್ತು ನಿರುದ್ಯೋಗ ಸಮಸ್ಯೆ ನಿವಾರಿಸಿ ದೇಶದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಅವರು ಸಲಹೆ ನೀಡಿದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಸಬ್ಬೀರ್ ಪಾಷ ಮಾತನಾಡಿ, ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆಯ ಅಡಿಯಲ್ಲಿ 2017-18ನೇ ಸಾಲಿನಲ್ಲಿ ದೊರೆಯುವ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮ ಸಂಯೋಜಕ ಬಿ.ಸಿ.ಯೋಗಾನಂದ ಮಾತನಾಡಿದರು. ಸಂಸ್ಥೆ ಪ್ರಾಂಶುಪಾಲ ರೂಪ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ನಾಗರಾಜು, ಉಮಾಪತಿ, ಷಣ್ಮುಕಪ್ಪ, ಉದಯಕುಮಾರ್, ಕಾವೇರಿ ನದಿ ಸಂರಕ್ಷಣಾ ಆಂದೋಲನದ ಸಂಚಾಲಕ ಎಂ.ಎನ್.ಚಂದ್ರಮೋಹನ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry