ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಜೆಪಿ ಅಭ್ಯರ್ಥಿಯಾಗಲು ಅವಕಾಶ

Last Updated 24 ಜನವರಿ 2018, 10:51 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ (ಕೆಪಿಜೆಪಿ)ದಿಂದ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಿದೆ ಎಂದು ಪಕ್ಷದ ರಾಷ್ಟ್ರೀಯ ಘಟಕದ ಉಪಾಧ್ಯಕ್ಷ ಕೆ.ಎಸ್‌. ಗಿರೀಶ್‌ಕುಮಾರ್‌ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಿದೆ. ಕ್ಷೇತ್ರದ ಸಾಮಾಜಿಕ, ಆರ್ಥಿಕ, ಭೌಗೋಳಿಕ ಮಾಹಿತಿ ತಿಳಿದ ಮತ್ತು ಜನರ ಕುಂದು ಕೊರತೆ ಅರಿತ ವ್ಯಕ್ತಿಗಳನ್ನು ಅಭ್ಯರ್ಥಿಯಾಗಿ ಪರಿಗಣಿಸಲಾಗುವುದು’ ಎಂದು ತಿಳಿಸಿದರು.

‘ಸದೃಢ ಕರ್ನಾಟಕ, ಭ್ರಷ್ಟಾಚಾರ ಮುಕ್ತ ರಾಜಕಾರಣ, ಯುವ ಜನರು, ಮಹಿಳೆ, ರೈತರು, ಕಾರ್ಮಿಕರು, ಮಹಿಳಾ ಸಬಲೀಕರಣಕ್ಕಾಗಿ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ಶ್ರಮಿಸಲಿದೆ. ಈ ನಿಟ್ಟಿನಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಇರುವವರು ಅಭ್ಯರ್ಥಿಯಾಗಲು ಅರ್ಜಿ ಸಲ್ಲಿಸಬಹುದು’ ಎಂದರು.

ಪಕ್ಷದ ಸಾರ್ವಜನಿಕ ಸಂಪರ್ಕಾಧಿಕಾರಿ ತಟ್ಟೀಕೆರೆ ಮಲ್ಲೇಶ್‌ ಮಾತನಾಡಿ, ಪಕ್ಷದ ಗುರಿ, ಧ್ಯೇಯ, ಉದ್ದೇಶಗಳನ್ನು ಇಟ್ಟಿಕೊಂಡು ರಾಜ್ಯದಾದ್ಯಂತ ಪ್ರಚಾರ ಶುರುವಾಗಿದೆ. ಎಲ್ಲ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಪಕ್ಷದ ಪ್ರಣಾಳಿಕೆಯನ್ನು ಫೆಬ್ರುವರಿ ಮೊದಲ ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಪಕ್ಷದ ರಾಜ್ಯ ಘಟಕದ ಕಾರ್ಯದರ್ಶಿ ಗಜೇಂದ್ರ ಶರ್ಮ, ಯುವ ಮುಖಂಡರಾದ ಸಂಜಯ್‌, ಎಲ್‌.ಆರ್‌.ಎಸ್‌ ಶೆಟ್ಟಿ, ಮಾಲತೇಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT