ಸಚಿವ ಹೆಗಡೆ ಕೈ ಬಿಡಲು ಆಗ್ರಹ

7

ಸಚಿವ ಹೆಗಡೆ ಕೈ ಬಿಡಲು ಆಗ್ರಹ

Published:
Updated:

ಧಾರವಾಡ: ದಲಿತರ ಕುರಿತು ಹಗುರವಾಗಿ ಮಾತನಾಡಿರುವ ಅನಂತಕುಮಾರ ಹೆಗಡೆ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡುವಂತೆ ಆಗ್ರಹಿಸಿ ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿಕೆ ನೀಡುವ ಮೂಲಕ ಹಾಗೂ ಬಳ್ಳಾರಿಯ ಕಾರ್ಯಕ್ರಮದಲ್ಲಿ ಬೀದಿ ನಾಯಿಗಳಿಗೆ ನಾವು ಹೆದರುವುದಿಲ್ಲ ಎಂಬ ಹೇಳಿಕೆ ನೀಡುವ ಮೂಲಕ ದಲಿತರಿಗೆ ಅವಮಾನ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಹೆಗಡೆ ಭಾವಚಿತ್ರ ದಹಿಸುವ ಮೂಲಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನದ ಬಗ್ಗೆ ಮಾತನಾಡುವಾಗ ಯೋಚನೆ ಮಾಡಿ ಮಾತನಾಡಬೇಕು. ಇಂತಹ ಪ್ರಚೋದನಕಾರಿ ಹೇಳಿಕೆ ನೀಡುವವರಿಗೆ ಮತ್ತು ಸಚಿವರಿಗೆ ಕುಮ್ಮಕ್ಕು ನೀಡುತ್ತಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ತಕ್ಷಣ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಮುಖಂಡರಾದ ಮಹೇಶ ಹುಲೆಣ್ಣವರ, ದೀಪಕ ಚಿಂಚೂರೆ, ರಾಬರ್ಟ ದದ್ದಾಪುರಿ, ಪ್ರಕಾಶ ಘಾಟಗೆ, ಹನುಮಂತ ಹರಿಜನ, ಬುರಾನ ಗವಳಿ, ಆನಂದ ಮುಶೆಣ್ಣವರ, ಶಂಕರ ಹೊಸಮನಿ ಪ್ರತಿಭಟನೆಯಲ್ಲಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry