ಜಿಲ್ಲಾಧಿಕಾರಿ ಕಚೇರಿ ಎದುರೇ ಅಡುಗೆ ಮಾಡಿ ಪ್ರತಿಭಟನೆ ನಡೆಸಿದ ಮಹಿಳೆಯರು

7

ಜಿಲ್ಲಾಧಿಕಾರಿ ಕಚೇರಿ ಎದುರೇ ಅಡುಗೆ ಮಾಡಿ ಪ್ರತಿಭಟನೆ ನಡೆಸಿದ ಮಹಿಳೆಯರು

Published:
Updated:

ಧಾರವಾಡ: ವಸತಿರಹಿತ ಬಡ ಕುಟುಂಬಗಳಿಗೆ ಆಶ್ರಯ ಮನೆ ಹಾಗೂ ನಿವೇಶನ ನೀಡುವಂತೆ ಆಗ್ರಹಿಸಿ 20 ದಿನಗಳಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿರುವ ಸಮತಾ ಸೇನಾ ಕಾರ್ಯಕರ್ತರು, ಮಂಗಳವಾರ ಪ್ರತಿಭಟನಾ ಸ್ಥಳದಲ್ಲೇ ಅಡುಗೆ ತಯಾರಿಸಿ, ಊಟ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಇಲ್ಲಿನ ಗಿರಿನಗರ ರಸ್ತೆ ಬದಿಯಲ್ಲಿರುವ ಸರ್ಕಾರಿ ಜಮೀನು ಪಾಳು ಬಿದ್ದಿದ್ದು, ಈ ಜಾಗದಲ್ಲಿ ವಸತಿ ರಹಿತ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಬೇಕು ಎಂದು ಆಗ್ರಹಿಸಿದರು.

ನಗರದ ವಿವಿಧ ಬಡಾವಣೆಗಳಲ್ಲಿ ವಾಸಿಸುತ್ತಿರುವ ವಸತಿ ರಹಿತರಿಗೆ ಆಶ್ರಯ ಮನೆ ಇಲ್ಲವೇ ನಿವೇಶನ ನೀಡುವಂತೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಈ ಬಾರಿ ನ್ಯಾಯ ಸಿಗುವವರೆಗೂ ಹೋರಾಟ ನಡೆಸಲಿದ್ದೇವೆ ಎಂದು ಎಚ್ಚರಿಕೆ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry