ಎಎಪಿ ಶಾಸಕರ ಅನರ್ಹ ಪ್ರಕರಣ: ತಡೆಯಾಜ್ಞೆ ನೀಡಲು ದೆಹಲಿ ಹೈಕೋರ್ಟ್ ನಕಾರ

7

ಎಎಪಿ ಶಾಸಕರ ಅನರ್ಹ ಪ್ರಕರಣ: ತಡೆಯಾಜ್ಞೆ ನೀಡಲು ದೆಹಲಿ ಹೈಕೋರ್ಟ್ ನಕಾರ

Published:
Updated:
ಎಎಪಿ ಶಾಸಕರ ಅನರ್ಹ ಪ್ರಕರಣ: ತಡೆಯಾಜ್ಞೆ ನೀಡಲು ದೆಹಲಿ ಹೈಕೋರ್ಟ್ ನಕಾರ

ನವದೆಹಲಿ: ಆಮ್‌ ಆದ್ಮಿ ಪಕ್ಷದ 20 ಶಾಸಕರನ್ನು ಅನರ್ಹಗೊಳಿಸಿ ಚುನಾವಣಾ ಆಯೋಗ ಹೊರಡಿಸಿರುವ ಅಧಿಸೂಚನೆಗೆ ತಡೆಯಾಜ್ಞೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

ಆದರೆ, ಜನವರಿ 29ರವರೆಗೆ ಉಪಚುನಾವಣೆ ದಿನಾಂಕ ಘೋಷಿಸದಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಅನರ್ಹತೆ ಪ್ರಶ್ನಿಸಿ ಶಾಸಕರು ಸಲ್ಲಿಸಿರುವ ಅರ್ಜಿ ಬಗ್ಗೆ ಉತ್ತರ ಸಲ್ಲಿಸುವಂತೆ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರಕ್ಕೆ ನ್ಯಾಯಮೂರ್ತಿ ವಿಭು ಬಖ್ರು ಸೂಚಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಚುನಾವಣಾ ಆಯೋಗ ಜ.29ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry