ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ: ನಾಲ್ವರು ಪೊಲೀಸರು ಸಾವು

7

ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ: ನಾಲ್ವರು ಪೊಲೀಸರು ಸಾವು

Published:
Updated:
ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ: ನಾಲ್ವರು ಪೊಲೀಸರು ಸಾವು

ರಾಯಪುರ: ಚತ್ತೀಸಗಡದ ನಾರಾಯಣ್‌ಪುರ ಜಿಲ್ಲೆಯಲ್ಲಿ ಮಾವೋವಾದಿ ಹಾಗೂ ಪೊಲೀಸರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ ಹಾಗೂ ಇಬ್ಬರು ಪೊಲೀಸರು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ.

ಇಲ್ಲಿನ ಇರ್ಪಾನರ್‌ ಅರಣ್ಯದಲ್ಲಿ ವಿಶೇಷ ಪೊಲೀಸ್ ಕಾರ್ಯಪಡೆ ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡಿತ್ತು.  ಘಟನೆಯಲ್ಲಿ ನಾಲ್ವರು ಪೊಲೀಸರು ಮೃತಪಟ್ಟಿದ್ದು 7 ಜನರು ಗಾಯಗೊಂಡಿದ್ದಾರೆ.  ಗಾಯಗೊಂಡವರನ್ನು ರಾಯಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಮತ್ತು ಮಾವೋವಾದಿಗಳ ನಡುವೆ ಬೆಳಿಗ್ಗೆ ಸುಮಾರು 11 ಗಂಟೆ ಗುಂಡಿನ ಚಕಮಕಿ ಆರಂಭವಾಗಿತ್ತು.  ಎರಡು ಗಂಟೆಗಳ ಕಾಲ ನಿರಂತರ ದಾಳಿ, ಪ್ರತಿದಾಳಿ ನಡೆಯಿತು ಎಂದು ಐಜಿಪಿ ವಿವೇಕಾನಂದ ಸಿಂಹ ಅವರು ಹೇಳಿದ್ದಾರೆ. 

ಮಾವೋವಾದಿಗಳ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry