ಶುಲ್ಕ ಹೆಚ್ಚಳಕ್ಕೆ ಮನವಿ ಸಲ್ಲಿಸಿದ ಖಾಸಗಿ ಕಾಲೇಜು ಆಡಳಿತ ಮಂಡಳಿ

7

ಶುಲ್ಕ ಹೆಚ್ಚಳಕ್ಕೆ ಮನವಿ ಸಲ್ಲಿಸಿದ ಖಾಸಗಿ ಕಾಲೇಜು ಆಡಳಿತ ಮಂಡಳಿ

Published:
Updated:
ಶುಲ್ಕ ಹೆಚ್ಚಳಕ್ಕೆ ಮನವಿ ಸಲ್ಲಿಸಿದ ಖಾಸಗಿ ಕಾಲೇಜು ಆಡಳಿತ ಮಂಡಳಿ

ಬೆಂಗಳೂರು: ವೈದ್ಯಕೀಯ ಸ್ನಾತಕೋತ್ತರ (ಪಿ.ಜಿ) ಕೋರ್ಸ್‌ಗಳ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಏರಿಸುವಂತೆ ಖಾಸಗಿ ವೈದ್ಯ ಕಾಲೇಜುಗಳ ಆಡಳಿತ ಮಂಡಳಿ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

‘ಸರ್ಕಾರಿ ಕೋಟಾದಡಿ ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ವಾರ್ಷಿಕ ಶುಲ್ಕ ಸರಾಸರಿ ₹6 ಲಕ್ಷದಷ್ಟಿದೆ. ಈ ಶುಲ್ಕವನ್ನು ಡೀಮ್ಡ್‌ ವಿಶ್ವವಿದ್ಯಾಲಯದಲ್ಲಿ ವಿಧಿಸುತ್ತಿರುವ ಮಾದರಿಯಲ್ಲಿ ಶುಲ್ಕ ಏರಿಸುವಂತೆ ಬೇಡಿಕೆ ಬಂದಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಮಾಧ್ಯಮ ಪ್ರತಿನಿಧಿಗಳಿಗೆ ಬುಧವಾರ ತಿಳಿಸಿದರು.

‘ಡೀಮ್ಡ್‌ ವಿಶ್ವವಿದ್ಯಾಲಯಗಳಲ್ಲಿ ವಿಷಯವಾರು ಕೋರ್ಸ್‌ಗೆ ತಕ್ಕಂತೆ ವಾರ್ಷಿಕ ಶುಲ್ಕ ಕನಿಷ್ಠ ₹12 ಲಕ್ಷದಿಂದ ಗರಿಷ್ಠ ₹24 ಲಕ್ಷದವರೆಗೆ ವಿಧಿಸಲಾಗುತ್ತಿದೆ. ಅವರು ಕೇಳಿದಷ್ಟು ಪ್ರಮಾಣದಲ್ಲಿ ಶುಲ್ಕ ಹೆಚ್ಚಳ ಮಾಡಲು ಸಾಧ್ಯವಿಲ್ಲ. ಈ ಸಂಬಂಧ ಆಡಳಿತ ಮಂಡಳಿ ಜತೆ ಮಾತುಕತೆ ನಡೆಸಲಾಗುವುದು. ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಏರಿಕೆ ಮಾಡಲಾಗುವುದು’ ಎಂದು ತಿಳಿಸಿದರು.

‘ವೈದ್ಯಕೀಯ ಪದವಿ ಕೋರ್ಸ್‌ಗಳ ಶುಲ್ಕ ಹೆಚ್ಚಿಸಬೇಕು ಎಂಬ ಬೇಡಿಕೆ ಸದ್ಯಕ್ಕೆ ಬಂದಿಲ್ಲ. ಕಳೆದ ವರ್ಷ ಮಾಡಿಕೊಂಡ ಒಪ್ಪಂದ ಸದ್ಯಕ್ಕೆ ಚಾಲ್ತಿಯಲ್ಲಿದೆ. ಆ ಬಗ್ಗೆ ಪ್ರಸ್ತಾವ ಬಂದರೆ ಮಾತುಕತೆ ನಡೆಸಿ, ಶುಲ್ಕ ನಿಗದಿ ಮಾಡಲಾಗುವುದು’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry