ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್‌ ಗಾಂಧಿ ಪ್ರವಾಸದ ವೇಳೆಯೂ ಬಂದ್: ಬಿಎಸ್‌ವೈ

Last Updated 24 ಜನವರಿ 2018, 19:30 IST
ಅಕ್ಷರ ಗಾತ್ರ

ಮಡಿಕೇರಿ: ಮಹದಾಯಿ ವಿಚಾರದಲ್ಲಿ ತಮ್ಮ ನಿಲುವು ಸ್ಪಷ್ಟಪಡಿಸುವಂತೆ ಒತ್ತಾಯಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ಪ್ರವಾಸ ಮಾಡುವ ಸಮಯದಲ್ಲಿ ಬಂದ್ ನಡೆಸಲಾಗುವುದು. ಆ ಮೂಲಕ ಕಾಂಗ್ರೆಸ್ ನಾಯಕರಿಗೆ ಬಿಸಿ ಮುಟ್ಟಿಸಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಇಲ್ಲಿ ಬುಧವಾರ ಎಚ್ಚರಿಸಿದರು.

ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿ, ‘ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಅವರು ಮಹದಾಯಿ ವಿಚಾರದಲ್ಲಿ ಮೌನ ವಹಿಸಿದ್ದಾರೆ. ರಾಹುಲ್‌ ಗಾಂಧಿ ಭೇಟಿ ನೀಡುವ ಜಿಲ್ಲೆಗಳಿಗೆ ಸೀಮಿತವಾಗಿ ಬಂದ್‌ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಸ್ಯೆ ಬಗೆಹರಿಸುವ ಬದಲು ರಾಜಕಾರಣ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ರಾಜ್ಯದಲ್ಲಿ ಗುರುವಾರ ನಡೆಯಲಿರುವ ಬಂದ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಮ್ಮಕ್ಕಿದೆ. ಮೈಸೂರಿನ ಬಿಜೆಪಿ ಸಮಾವೇಶ ವಿಫಲಗೊಳಿಸುವ ದುರುದ್ದೇಶದಿಂದ ಸಂಘಟನೆಗಳನ್ನು ಎತ್ತಿಕಟ್ಟುವ ಕೆಲಸಕ್ಕೆ ಕೈಹಾಕಿದ್ದಾರೆ. ಪೂರ್ವ ನಿಗದಿಯಂತೆ ಸಮಾವೇಶ ನಡೆಯಲಿದೆ. ಫೆ. 4ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿದ್ದು, ಅಂದೂ ಸಹ ಬಂದ್‌ಗೆ ಕರೆ ನೀಡಲಾಗಿದೆ. ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ನಮಗೂ ರಾಜಕಾರಣ ಗೊತ್ತಿದೆ. ಮುಂದೆ ತೋರಿಸುತ್ತೇವೆ’ ಎಂದು ಎಚ್ಚರಿಸಿದರು.

ಸಿಬಿಐ ತನಿಖೆಗೆ ಆಗ್ರಹ: ‘ಮಲೇಷ್ಯಾದ ಮರಳು ಆಮದಿನಲ್ಲಿ ₹ 5,800 ಕೋಟಿಗಳಷ್ಟು ಅವ್ಯವಹಾರ ನಡೆದಿರುವ ಶಂಕೆಯಿದೆ. ಟೆಂಡರ್‌ ನಿಯಮ ಉಲ್ಲಂಘಿಸಿ ಬೋಗಸ್‌ ಕಂಪನಿಗೆ ಮರಳು ಪೂರೈಸುವ ಜವಾಬ್ದಾರಿ ನೀಡಲಾಗಿದೆ. ಇದು ಗಂಭೀರ ಪ್ರಕರಣವಾಗಿದ್ದು, ಸಿಬಿಐ ತನಿಖೆ ನಡೆಸಬೇಕು’ ಎಂದು ಯಡಿಯೂರಪ್ಪ ಆಗ್ರಹಿಸಿದರು.

‘ತಮಿಳುನಾಡು ಸರ್ಕಾರವು ಮಲೇಷ್ಯಾದ ಪ್ರತಿ ಟನ್‌ ಮರಳಿಗೆ ₹ 925 ನೀಡಿದರೆ, ರಾಜ್ಯ ಸರ್ಕಾರ ₹ 2,300 ನೀಡಿ ಖರೀದಿಸುತ್ತಿದೆ. ಚುನಾವಣೆ ಹತ್ತಿರದಲ್ಲಿರುವ ಕಾರಣ ಸಿದ್ದರಾಮಯ್ಯ ದೋಚಿಕೊಂಡು ಹೋಗಲು ಮುಂದಾಗಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT