ಜೆಡಿಎಸ್‌ ಜತೆ ಒಳ ಒಪ್ಪಂದ ಇಲ್ಲ: ಡಿ.ಕೆ.ಶಿ

7

ಜೆಡಿಎಸ್‌ ಜತೆ ಒಳ ಒಪ್ಪಂದ ಇಲ್ಲ: ಡಿ.ಕೆ.ಶಿ

Published:
Updated:

ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್‌ ಜತೆ ಒಳ ಒಪ್ಪಂದ ಮಾಡಿಕೊಂಡಿಲ್ಲ. ಅಲ್ಲಿ ತ್ರಿಕೋನ ಸ್ಪರ್ಧೆಯೇ ನಡೆಯುತ್ತದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

‘ನಾನು ಎಂದೂ ಒಳ ಒಪ್ಪಂದದ ರಾಜಕಾರಣ ಮಾಡಿಲ್ಲ. ನೇರ ರಾಜಕಾರಣ ಮಾಡಿಕೊಂಡೇ ಬಂದಿದ್ದೇನೆ’ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

‘ವಿಧಾನಸಭಾ ಚುನಾವಣೆಗೆ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸುವುದಿಲ್ಲ. ನನ್ನ ತಂಗಿ ಗಂಡ ಶರತ್‌ ಚಂದ್ರ ಚನ್ನಪಟ್ಟಣದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಎಂಬುದು ಸತ್ಯಕ್ಕೆ ದೂರ. ಅಭ್ಯರ್ಥಿ ಯಾರು ಆಗಬೇಕು ಎಂಬುದನ್ನು ಹೈಕಮಾಂಡ್‌ ನಿರ್ಧರಿಸುತ್ತದೆ’ ಎಂದು ಅವರು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry