ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕಲಿ ಅಂಕಪಟ್ಟಿ ಜಾಲ ಪತ್ತೆ; ಮೂವರ ಸೆರೆ

Last Updated 24 ಜನವರಿ 2018, 20:27 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಸೇರಿದಂತೆ ಹಲವು ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿಗಳನ್ನು ಮುದ್ರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿರುವ ಸಿಸಿಬಿ ಪೊಲೀಸರು, ಮೂವರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ.

ಮಹಾಲಕ್ಷ್ಮಿ ಲೇಔಟ್‌ನ ಮನೆಯೊಂದರ ಮೇಲೆ ಗುರುವಾರ ಸಂಜೆ ದಾಳಿ ನಡೆಸಿದ್ದ ಪೊಲೀಸರು, ಶ್ರೀನಿವಾಸ್‌ ರೆಡ್ಡಿ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಿದ್ದಾರೆ. ಬಿ.ಬಿ.ಎಂ, ಬಿ.ಬಿ.ಎ, ಎಂ.ಬಿ.ಎ, ಎಂ.ಎ ಹಾಗೂ ಎಂಜಿನಿಯರಿಂಗ್ ಸೇರಿ ಹಲವು ಕೋರ್ಸ್‌ಗಳ 10 ಸಾವಿರಕ್ಕೂ ಹೆಚ್ಚು ನಕಲಿ ಅಂಕಪಟ್ಟಿಗಳನ್ನು ಜಪ್ತಿ ಮಾಡಿದ್ದಾರೆ.

ಹೊರ ಜಿಲ್ಲೆ ಹಾಗೂ ರಾಜ್ಯಗಳ ಅಭ್ಯರ್ಥಿಗಳು ಆರೋಪಿಗಳ ಬಳಿ ಅಂಕಪಟ್ಟಿಗಳನ್ನು ಖರೀದಿಸಿದ್ದಾರೆ. ಅವುಗಳನ್ನು ಬಳಸಿಕೊಂಡು ಖಾಸಗಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕೆಲಸವನ್ನು ಪಡೆದುಕೊಂಡಿರುವ ಮಾಹಿತಿ ಇರುವುದಾಗಿ ಪೊಲೀಸರು ಹೇಳಿದರು.

‘ಹಲವು ವರ್ಷಗಳಿಂದ ಆರೋಪಿಗಳು ಈ ಕೃತ್ಯ ಎಸಗುತ್ತಿದ್ದರು ಎಂಬುದು ಗೊತ್ತಾಗಿದೆ. ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಮಹಾರಾಷ್ಟ್ರದ ಹಲವರಿಗೆ ₹25,000ದಿಂದ ₹1 ಲಕ್ಷಕ್ಕೆ ಅಂಕಪಟ್ಟಿ ಮಾರಾಟ ಮಾಡಿದ್ದಾರೆ. ಇವರ ಬಳಿ ಅಂಕಪಟ್ಟಿ ಖರೀದಿಸಿದ್ದ ಹಲವರು ಸಾಫ್ಟ್‌ವೇರ್‌ ಕಂಪನಿಗಳಲ್ಲೂ ಕೆಲಸ ಮಾಡುತ್ತಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT