ಶನಿವಾರ, 27 ಏಪ್ರಿಲ್ 2024

ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದಾಯಿ ಹೋರಾಟ ಬೆಂಬಲಿಸಿ ಪ್ರತಿಭಟನೆ: ಅಂಗಡಿಗಳು ಬಂದ್, ಬಸ್ ಸಂಚಾರ ಸ್ಥಗಿತ

Last Updated 25 ಜನವರಿ 2018, 4:58 IST
ಅಕ್ಷರ ಗಾತ್ರ

ಚಿತ್ರದುರ್ಗ: ಮಹದಾಯಿ ಹೋರಾಟ ಬೆಂಬಲಿಸಿ ನಗರದ‌ ಮಹಾತ್ಮ ಗಾಂಧಿ ವೃತ್ತದಲ್ಲಿ ಗುರುವಾರ ಕರುನಾಡ ರಕ್ಷಣಾ ವೇದಿಕೆಯವರು ಪ್ರತಿಭಟನೆ ನಡೆಸಿದರು.

ತಮಟೆ ಬಡಿಯುತ್ತಾ, ಗೋವಾ ಸರ್ಕಾರದ‌ವಿರುದ್ಧ ಘೋಷಣೆ ಕೂಗುತ್ತಾ, ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಭಾವಚಿತ್ರದೊಂದಿಗೆ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿ ದಹನ ಮಾಡಿದರು.

ಪ್ರತಿಭಟನೆಗಳು‌ ನಡೆಯುವ ಹಿನ್ನೆಲೆಯಲ್ಲಿ ನಗರದ‌ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್‌ ಮಾಡಲಾಗಿತ್ತು. ಸಶಸ್ತ್ರ ಮೀಸಲು ಪಡೆಯವರನ್ನು ನಿಯೋಜಿಸಲಾಗಿತ್ತು.

ದೂರದೂರಿಗೆ ಹೋಗುವ ಕೆಎಸ್ಆರ್‌ಟಿಸಿ ಬಸ್ ಸಂಚಾರ‌ ಸ್ಥಗಿತಗೊಂಡಿತ್ತು. ಪ್ರಯಾಣಿಕರು ಬಸ್ ನಿಲ್ದಾಣದಲ್ಲಿ ಪರದಾಡುತ್ತಿದ್ದರು. ವಿಶೇಷವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸುವವರಿಗೆ ತೀವ್ರ ತೊಂದರೆಯಾಗಿದೆ. ನಿನ್ನೆ ಬಸ್ ಸಂಚಾರ ಸ್ಥಗಿತಗೊಳ್ಳುವ ಅಧಿಕೃತ ಆದೇಶ ಇಲ್ಲದ ಹಿನ್ನೆಲೆಯಲಿ ಈ ಅವ್ಯವಸ್ಥೆಗೆ ಕಾರಣವಾಗಿದೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು‌‌.

ಖಾಸಗಿ ಬಸ್‌ಗಳು ಎಂದಿನಂತೆ ಸಂಚರಿಸುತ್ತಿದ್ದವು. ಬೆಳಗಿನ ವ್ಯಾಪಾರ ವಹಿವಾಟು ಸಾಮಾನ್ಯವಾಗಿತ್ತು.

ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು 10 ಗಂಟೆಗೆ ರೈಲು ತಡೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಬಸ್ ಸಂಚಾರ ಸ್ಥಗಿತ

ರಾಮನಗರ: ನಗರದಲ್ಲಿ ಅಂಗಡಿಗಳು ಮುಚ್ಚಿವೆ. ಕೆಎಸ್ಆರ್‌ಟಿಸಿ ಬಸ್ ಸಂಚಾರ ಸ್ಥಗಿತಗೊಂಡಿದೆ.  ಆದರೆ ಖಾಸಗಿ ಬಸ್, ವಾಹನಗಳ ಸಂಚಾರ ಎಂದಿನಂತೆ ಇದೆ.

ಬೆಂಗಳೂರಿಗೆ ಉದ್ಯೋಗಕ್ಕೆಂದು ತೆರಳುವವರು ಬಸ್ ಗಳ ಕೊರತೆಯಿಂದಾಗಿ ಪರದಾಡುತ್ತಿದ್ದಾರೆ. ರೈಲು ನಿಲ್ದಾಣದಲ್ಲಿ ಜನ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಬೆಳಿಗ್ಗೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆ, ಕರುನಾಡ ಸೇನೆ, ಕನ್ನಡ ಜನಮನ ವೇದಿಕೆ ಮೊದಲಾದ ಸಂಘಟನೆಗಳು ಇಲ್ಲಿನ ಐಜೂರು ವೃತ್ತದಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರೀಕರ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದವು.

ಪ್ರತಿಕೃತಿ ದಹಿಸಿ ಆಕ್ರೋಶ

ಧಾರವಾಡ: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕನ್ನಡ ಸಂಘಟನೆ ಹಾಗೂ ರೈತ ಸಂಘಟನೆಗಳ ಹೋರಾಟಗಾರು ಗುರುವಾರ ಬೆಳಿಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಮಹದಾಯಿ ನದಿ ನೀರು ಹಂಚಿಕೆಗೆ ಅಪಸ್ವರ ತೆಗೆದಿರುವ ಹಾಗೂ ಕನ್ನಡಿಗರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಗೋವಾ ಜಲಸಂಪನ್ಮೂಲ ಸಚಿವ ಪಾಲ್ಯೆಕರ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಅಂಗಡಿ ಮುಗ್ಗಟ್ಟು, ಶಾಲಾ ಕಾಲೇಜು, ಮಾರುಕಟ್ಟೆ ಪ್ರದೇಶ, ಸಾರಿಗೆ ಸಂಪೂರ್ಣ ಸ್ಥಗಿತಗೊಂಡಿದೆ.

ಅಹಿತಕರ ಘಟನೆಗಳು ಸಂಭವಿಸದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಚಿಕ್ಕಮಗಳೂರು: ಕನ್ನಡ ಸಂಘಟನೆಗಳ ಕಾರ್ಯಕರ್ತರು ಎಂ.ಜಿ ರಸ್ತೆ, ಐ.ಜಿ ರಸ್ತೆಗಳಲ್ಲಿ ಅಂಗಡಿ, ಹೋಟೆಲುಗಳು, ಮಳಿಗೆಗಳ ಬಾಗಿಲು ಮುಚ್ಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT