ಪ್ರಧಾನಿ ಮೋದಿ ವಿರುದ್ಧ ಪ್ರತಿಭಟನಾಕಾರರ ಆಕ್ರೋಶ; ಪ್ರತಿಕೃತಿ ದಹನ

7

ಪ್ರಧಾನಿ ಮೋದಿ ವಿರುದ್ಧ ಪ್ರತಿಭಟನಾಕಾರರ ಆಕ್ರೋಶ; ಪ್ರತಿಕೃತಿ ದಹನ

Published:
Updated:
ಪ್ರಧಾನಿ ಮೋದಿ ವಿರುದ್ಧ ಪ್ರತಿಭಟನಾಕಾರರ ಆಕ್ರೋಶ; ಪ್ರತಿಕೃತಿ ದಹನ

ಬೆಂಗಳೂರು: ಮಹದಾಯಿ ವಿವಾದ ಇತ್ಯರ್ಥಕ್ಕೆ ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಬಂದ್‌ಗೆ ಕರೆ ಕೊಟ್ಟಿರುವ ಕನ್ನಡ ಸಂಘಟನೆಗಳ ಕಾರ್ಯಕರ್ತರು ನಗರದ ಪುರಭವನದ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.

ಖಾಲಿ ಬಿಂದಿಗೆಗಳನ್ನು ಹಿಡಿದ ಪ್ರತಿಭಟನಾಕಾರರು ರಸ್ತೆಯಲ್ಲಿ ಮಲಗಿ ಮಹದಾಯಿ ನಮ್ಮದು ಎಂದು ಘೋಷಣೆ ಕೂಗಿದರು ಹಾಗೂ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದ ವರೆಗೆ ಕೆಲ ಸಮಯದಲ್ಲಿ ಬೃಹತ್ ಮೆರವಣಿಗೆ ಸಾಗಲಿದೆ.

ಕರ್ನಾಟಕ ಚಲನಚಿತ್ರ ಕಾರ್ಮಿಕರ ಕಲಾವಿದರ ತಂತ್ರಜ್ಞರ ಒಕ್ಕೂಟವು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry