ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ

7

ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ

Published:
Updated:

ಕನ್ನಡದ ಪ್ರಮುಖ ಸಿನಿಮಾ ಪ್ರಚಾರ ಸಂಸ್ಥೆಯಾಗಿರುವ ರಾಘವೇಂದ್ರ ಚಿತ್ರವಾಣಿಯ 41ನೇ ವಾರ್ಷಿಕೋತ್ಸವ ಮತ್ತು 17ನೇ ಪ್ರಶಸ್ತಿ ಪ್ರದಾನ ಸಮಾರಂಭ ಇದೇ ಶನಿವಾರ (ಜ.27)ರಂದು ಬೆಂಗಳೂರಿನ ಚಾಮುಂಡೇಶ್ವರಿ ಸ್ಟುಡಿಯೊದಲ್ಲಿ ಸಂಜೆ 5.30ಕ್ಕೆ ನಡೆಯಲಿದೆ. ಕನ್ನಡ ಚಿತ್ರರಂಗದ ಪ್ರಮುಖ ಗಣ್ಯರು ಈ ಸಮಾರಂಭದ ಮುಖ್ಯಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.

‘ದಿವಂಗತ ಡಿ.ವಿ ಸುಧೀಂದ್ರ ಅವರು ತಮ್ಮ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ ಸಂದರ್ಭದಲ್ಲಿ, ಈ ಸುದೀರ್ಘ ಯಾನಕ್ಕೆ ಕಾರಣಕರ್ತರಾಗಿದ್ದ ನಿರ್ಮಾಪಕರು ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸುವ ಪರಿಪಾಠವನ್ನು ಆರಂಭಿಸಿದ್ದರು. ಈ ಪರಿಪಾಠ ಆರಂಭವಾಗಿದ್ದು ಕೇವಲ ಎರಡು ಪ್ರಶಸ್ತಿಗಳ ಮೂಲಕ. 11 ಪ್ರಶಸ್ತಿಗಳಿಗೆ ವಿಸ್ತಾರವಾಗಿದೆ. ನಿರ್ದೇಶಕರು, ನಿರ್ಮಾಪಕರು ಮತ್ತು ಪತ್ರಕರ್ತರು ಕೂಡಾ ಈ ಸಮಾರಂಭಕ್ಕೆ ಜೊತೆಯಾಗಿ ಅರ್ಥವಂತಿಕೆ ಹೆಚ್ಚಿಸಿದ್ದಾರೆ’ ಎಂದು ಸಂಸ್ಥೆಯ ಸುಧೀಂದ್ರ ವೆಂಕಟೇಶ್‌ ವಿವರಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry