4 ನೇ ಸಾಲಿನಲ್ಲಿ ರಾಹುಲ್‌ಗೆ ಆಸನ: ಆಕ್ಷೇಪ

7

4 ನೇ ಸಾಲಿನಲ್ಲಿ ರಾಹುಲ್‌ಗೆ ಆಸನ: ಆಕ್ಷೇಪ

Published:
Updated:
4 ನೇ ಸಾಲಿನಲ್ಲಿ ರಾಹುಲ್‌ಗೆ ಆಸನ: ಆಕ್ಷೇಪ

ನವದೆಹಲಿ: ‘ಗಣರಾಜ್ಯೋತ್ಸವ ಸಮಾರಂಭಕ್ಕೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಸರ್ಕಾರ ಆಹ್ವಾನಿಸಿದೆ. ಆದರೆ, ಅವರಿಗೆ ನಾಲ್ಕನೇ ಸಾಲಿನಲ್ಲಿ ಆಸನ ನಿಗದಿಪಡಿಸಲಾಗಿದೆ’ ಎಂದು ಕಾಂಗ್ರೆಸ್‌ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಈ ಹಿಂದೆ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮೊದಲ ಸಾಲಿನಲ್ಲಿ ರಾಹುಲ್‌ ಅವರಿಗೆ ಆಸನ ಮೀಸಲಿಡಲಾ ಗುತ್ತಿತ್ತು. ಆದರೆ, ಈಗ ಇಂತಹ ವಿಷಯದಲ್ಲೂ ಮೋದಿ ನೇತೃತ್ವದ ಸರ್ಕಾರ ಕೀಳುಮಟ್ಟದ ರಾಜಕೀಯ ಮಾಡುತ್ತಿದೆ. ಹೀಗಿದ್ದರೂ ರಾಹುಲ್‌ ಪಾಲ್ಗೊಳ್ಳಲಿದ್ದಾರೆ’ ಎಂದು ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

‘ಕಾಂಗ್ರೆಸ್‌ ನಾಯಕರಿಗೆ ಮುಜುಗರ ಉಂಟು ಮಾಡಲು ಈ ರೀತಿ ಮಾಡಲಾಗಿದೆ’ ಎಂದು ಇನ್ನೊಬ್ಬ ಕಾಂಗ್ರೆಸ್ ನಾಯಕರು ದೂರಿದ್ದಾರೆ. ಇದುವರೆಗಿನ ಎಲ್ಲ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್‌ ಪಕ್ಷದ ಎಲ್ಲ ಅಧ್ಯಕ್ಷರು ಮೊದಲ ಸಾಲಿನಲ್ಲಿ ಕುಳಿತುಕೊಳ್ಳುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಅಮಿತ್‌ ಶಾ ಅವರಿಗೆ ಮೊದಲ ಸಾಲಿನಲ್ಲಿ ಆಸನ ವ್ಯವಸ್ಥೆ ಮಾಡಲಾಗಿದೆ. ಆದರೆ, ರಾಜಕೀಯ ನಾಯಕರು, ಸಚಿವರ ಆಸನಗಳ ವ್ಯವಸ್ಥೆಯ ಬಗ್ಗೆ ಸರ್ಕಾರ ಅಧಿಕೃತ ಮಾಹಿತಿ ನೀಡಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry