ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ವರ್ಗಾವಣೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Last Updated 25 ಜನವರಿ 2018, 19:41 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಇದೇ 30ರವರೆಗೆ ವಿಸ್ತರಿಸಲಾಗಿದೆ.

ಈ ಮೊದಲು ಇದೇ 20ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಗಡುವು ವಿಧಿಸಲಾಗಿತ್ತು.

ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿಯ ಮುದ್ರಿತ ಪ್ರತಿಯನ್ನು ಪಡೆದು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸಲು ಇದೇ 31ರವರೆಗೆ ಇದ್ದ ಅವಕಾಶವನ್ನು ಫೆಬ್ರುವರಿ 9ರವರೆಗೆ ವಿಸ್ತರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೋರಿಕೆ ಹಾಗೂ ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಶಿಕ್ಷಕರ ತಾತ್ಕಾಲಿಕ ಆದ್ಯತಾ ಪಟ್ಟಿ ಫೆ.22ಕ್ಕೆ ಹಾಗೂ ಅಂತಿಮ ಪಟ್ಟಿ ಮಾರ್ಚ್‌ 13ಕ್ಕೆ ಪ್ರಕಟವಾಗಲಿದೆ. ಏಪ್ರಿಲ್ 7ರಿಂದ 9ರವರೆಗೆ ಕೌನ್ಸಿಲಿಂಗ್ ನಡೆಯಲಿದೆ.

10 ವರ್ಷಕ್ಕಿಂತ ಮೇಲ್ಪಟ್ಟು ‘ಎ’ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರನ್ನು ಕಡ್ಡಾಯ ವರ್ಗಾವಣೆ ಮಾಡುವ ಪ್ರಕ್ರಿಯೆ ಫೆ.9ಕ್ಕೆ ಆರಂಭವಾಗಲಿದ್ದು, 12ಕ್ಕೆ ಅಂತಿಮ ಪಟ್ಟಿ ಪ್ರಕಟವಾಗಲಿದೆ. ಏಪ್ರಿಲ್‌ 13ರಿಂದ 16ರವರೆಗೆ ಕೌನ್ಸಿಲಿಂಗ್ ನಡೆಯಲಿದೆ.

ಘಟಕದೊಳಗೆ, ಘಟಕದ ಹೊರಗೆ, ಅಂತರ ಜಿಲ್ಲಾ ಹಾಗೂ ಅಂತರ ವಿಭಾಗ ಹೀಗೆ ಎಲ್ಲ ವರ್ಗಾವಣೆಗಳನ್ನು ಏಪ್ರಿಲ್ 30ರೊಳಗೆ ಪೂರ್ಣಗೊಳಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT