ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಔಷಧ ಉತ್ಪಾದನಾ ಕ್ಷೇತ್ರದಲ್ಲಿ ವಿಪುಲ ಅವಕಾಶ

ಬೆಂಗಳೂರಿನ ಫಾರ್ಮ ತರಬೇತಿ ಸಂಸ್ಥೆ ಡೀನ್ ಉಮಾ ನಂದನ್ ಮಿಶ್ರ
Last Updated 26 ಜನವರಿ 2018, 8:42 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ವಿಶ್ವದಲ್ಲೇ ಗುಣಮಟ್ಟದ ಔಷಧ ಉತ್ಪಾದಿಸುವ ದೇಶ ಭಾರತವಾಗಿದ್ದು, ವಿಶ್ವದ ಒಟ್ಟು ಉತ್ಪಾದನೆಯಲ್ಲಿ ಶೇ 20ರಷ್ಟು ನಮ್ಮ ದೇಶದ ಪಾಲಿದೆ’ ಎಂದು ಬೆಂಗಳೂರಿನ ಫಾರ್ಮಾ ತರಬೇತಿ ಸಂಸ್ಥೆ ಡೀನ್ ಉಮಾ ನಂದನ್ ಮಿಶ್ರ ತಿಳಿಸಿದರು.

ನಗರದ ಮುರುಘಾಮಠದ ಅನುಭವ ಮಂಟಪದಲ್ಲಿ ಎಸ್‌ಜೆಎಂ ಫಾರ್ಮಸಿ ಕಾಲೇಜಿನಿಂದ ಬುಧವಾರ ಆಯೋಜಿಸಿದ್ದ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ಔಷಧ ಉತ್ಪಾದನೆಯಲ್ಲಿ ಭಾರತ ಜಗತ್ತಿನಲ್ಲಿ ಮೂರನೇ ದೊಡ್ಡ ದೇಶವಾಗಿದೆ. ಪ್ರಸ್ತುತ ಜಗತ್ತಿನ 210 ದೇಶಗಳಿಗೆ ಔಷಧ ರಫ್ತು ಮಾಡುತ್ತಿರುವ ದೇಶವಾಗಿದೆ ಎಂದು ವಿವರಿಸಿದರು.

ದೇಶದಲ್ಲಿ 24 ಸಾವಿರ ಔಷಧ ಉತ್ಪಾದನಾ ಕಂಪನಿಗಳಿವೆ. ಅಮೆರಿಕಮತ್ತು ಚೀನಾ ರಾಷ್ಟ್ರಗಳಲ್ಲಿ ತಲಾ 2 ಸಾವಿರ ಕಂಪನಿಗಳಿವೆ. ಔಷಧ ಉತ್ಪಾದನಾ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿದ್ದು, ಆರೋಗ್ಯಕ್ಕೆ ಸಂಬಂಧಿಸಿದ ಕ್ಷೇತ್ರಗಳಿಗೆ ಸಾಕಷ್ಟು ಬೇಡಿಕೆ ಇದೆ ಎಂದರು.

ಔಷಧ ಕ್ಷೇತ್ರದಲ್ಲಿ ಫಾರ್ಮಾಸ್ಯುಟಿಕಲ್ ಪದವೀಧರರಿಗೆ ಉತ್ತಮ ಭವಿಷ್ಯವಿದೆ. ಮುಂದೆ ಎರಡು ಮೂರು ವರ್ಷಗಳ ಕಾಲ ಕಷ್ಟಪಟ್ಟರೆ ಭವಿಷ್ಯದಲ್ಲಿ ಉತ್ತಮ ಹುದ್ದೆಗಳನ್ನು ಅಲಂಕರಿಸಬಹುದು ಹಾಗೆಯೇ ಉತ್ತಮ ವೇತನ ಪಡೆಯಬಹುದು ಎಂದು ಹುರಿದುಂಬಿಸಿದರು.

ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ಫಾರ್ಮಾ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.

ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಕೆ.ವಿ.ಪ್ರಭಾಕರ್, ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಜಿ.ಎನ್. ಮಲ್ಲಿಕಾರ್ಜುನಪ್ಪ, ಡಾ.ಇ.ಚಿತ್ರಶೇಖರ್, ಪ್ರಾಚಾರ್ಯ ಡಾ.ಡಿ.ಆರ್.ಭಾರತಿ, ಸಮಾಜ ಸೇವಕಿ ಗಾಯತ್ರಿ ಶಿವರಾಂ ಮತ್ತಿತರರು ಉಪಸ್ಥಿತರಿದ್ದರು.

ಫಾರ್ಮಸಿ ಕಾಲೇಜಿನ 52 ಪದವಿ, 30 ಸ್ನಾತಕೋತ್ತರ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು. ನಂತರ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಸಾಂಸ್ಕೃತಿಕ ಹಬ್ಬದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT