ಕಡಲೆ ಖರೀದಿ ಕೇಂದ್ರ ಆರಂಭಿಸಿ: ರೈತರ ಮನವಿ

7

ಕಡಲೆ ಖರೀದಿ ಕೇಂದ್ರ ಆರಂಭಿಸಿ: ರೈತರ ಮನವಿ

Published:
Updated:

ಧಾರವಾಡ: ರೈತರಿಂದ ಕಡಲೆ, ಗೋಧಿ, ಜೋಳವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಪ್ರಾರಂಭಿಸುವಂತೆ ಹುಬ್ಬಳ್ಳಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸದಸ್ಯರು ಇತ್ತೀಚೆಗೆ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನ ಬೆಳೆಗಳ ಒಕ್ಕಲು ಮುಗಿದಿದ್ದು, ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ಮಾರಾಟವಾಗುತ್ತಿವೆ. ಹೀಗಾಗಿ ರೈತರು ಸಂಕಷ್ಟದಲ್ಲಿದ್ದಾರೆ ಎಂದು ಸದಸ್ಯರು ಅಳಲು ತೋಡಿಕೊಂಡರು.

ಕೇಂದ್ರ ಸರ್ಕಾರ ಘೋಷಿಸಿದ ಕನಿಷ್ಠ ಬೆಂಬಲ ಬೆಲೆಯಲ್ಲಿಯೇ ಈ ಬೆಳೆಗಳನ್ನು ಖರೀದಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದರು. ಹೀಗಾಗಿ ಖರೀದಿ ಕೇಂದ್ರಗಳನ್ನು ಶೀಘ್ರದಲ್ಲಿಯೇ ಪ್ರಾರಂಭಿಸಬೇಕು. ರೈತರಿಗೆ ಆಗುತ್ತಿರುವ ಸಂಕಷ್ಠ ತಪ್ಪಿಸಬೇಕು ಎಂದು ಮನವಿ ಸಲ್ಲಿಸಿದರು.

‘ಇಲ್ಲವಾದಲ್ಲಿ ಸರ್ಕಾರವೇ ಇದಕ್ಕೆ ನೇರ ಹೊಣೆಯಾಗಲಿದೆ ಎಂದು ರೈತರು ’ ಎಂದು ಮನವಿಯಲ್ಲಿ ಎಚ್ಚರಿಕೆ ತಿಳಿಸಿದ್ದಾರೆ.

ಎಪಿಎಂಸಿ ಸದಸ್ಯರಾದ ಶಂಕರಗೌಡ ಪಾಟೀಲ, ಸುರೇಶ ಕಿರೇಸೂರ, ಜಗನ್ನಾಥ ಸಿದ್ದನಗೌಡ್ರ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry