ಸಕ್ರಪ್ಪ ಮಾಸ್ತರ ಸಾಂಸ್ಕೃತಿಕ ವೇದಿಕೆ ಅಡಿಗಲ್ಲು ಇಂದು

6

ಸಕ್ರಪ್ಪ ಮಾಸ್ತರ ಸಾಂಸ್ಕೃತಿಕ ವೇದಿಕೆ ಅಡಿಗಲ್ಲು ಇಂದು

Published:
Updated:

ಶಿರಹಟ್ಟಿ: ತಾಲ್ಲೂಕಿನ ಮಾಗಡಿ ಗ್ರಾಮದ ಸಕ್ರಪ್ಪ ಮಾಸ್ತರ ಸಾಂಸ್ಕೃತಿಕ ವೇದಿಕೆ ಕಟ್ಟಡ ಅಡಿಗಲ್ಲು ಸಮಾರಂಭ ಜ.26 ರಂದು ನಡೆಯಲಿದೆ.

ಸಂಸದ ಶಿವಕುಮಾರ ಉದಾಸಿ ಶಂಕು ಸ್ಥಾಪನೆ ನೆರವೇರಿಸಲಿದ್ದು, ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ, ಶಾಸಕ ರಾಮಕೃಷ್ಣ ದೊಡ್ಡಮನಿ, ಮಾಜಿ ಶಾಸಕ ಜಿ.ಎಂ. ಮಹಾಂತಶೆಟ್ಟರ, ರಾಮಣ್ಣ ಲಮಾಣಿ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಬಿ.ಡಿ.ಪಲ್ಲೇದ ಭಾಗವಹಿಸಲಿದ್ದಾರೆ.

ಕನ್ನಡ ಮಾಧ್ಯಮ ಪ್ರಶಸ್ತಿ: ಇಲ್ಲಿನ ಎಫ್‌.ಎಂ.ಡಬಾಲಿ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ಪಾರ್ವತಿ ಗುಡಿಮನಿ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪ್ರಸಕ್ತ ಸಾಲಿನ ಕನ್ನಡ ಮಾಧ್ಯಮ ಪ್ರಶಸ್ತಿ ಲಭಿಸಿದೆ.

ಇತ್ತೀಚೆಗೆ ಕೂಡಲಸಂಗಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry