ಕಾಶ್ಮೀರ: ಶಂಕಿತ ಮಹಿಳಾ ಆತ್ಮಹತ್ಯಾ ಬಾಂಬರ್‌ ಬಂಧನ

7

ಕಾಶ್ಮೀರ: ಶಂಕಿತ ಮಹಿಳಾ ಆತ್ಮಹತ್ಯಾ ಬಾಂಬರ್‌ ಬಂಧನ

Published:
Updated:
ಕಾಶ್ಮೀರ: ಶಂಕಿತ ಮಹಿಳಾ ಆತ್ಮಹತ್ಯಾ ಬಾಂಬರ್‌ ಬಂಧನ

ಶ್ರೀನಗರ: ಪುಣೆ ಮೂಲದ ಶಂಕಿತ ಮಹಿಳಾ ಆತ್ಮಹತ್ಯಾ ಬಾಂಬರ್‌ನನ್ನು ಕಾಶ್ಮೀರ ಪೊಲೀಸರು ಗುರುವಾರ ತಡ ರಾತ್ರಿ ಬಂಧಿಸಿದ್ದಾರೆ.

ಶಂಕಿತ ಆತ್ಮಹತ್ಯಾ ಬಾಂಬರ್‌ ಕುರಿತಂತೆ ಪೊಲೀಸರು ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಬಂಧಿತ ಆತ್ಮಹತ್ಯೆ ಬಾಂಬರ್‌ ಪುಣೆಯಿಂದ ಶ್ರೀನಗರಕ್ಕೆ ವಲಸೆ ಬಂದು ನೆಲೆಸಿದ್ದಾರೆ. ಹಲವು ದಿನಗಳಿಂದ ಇಲ್ಲಿ ನೆಲೆಸಿದ್ದು ಪಾಕಿಸ್ತಾನದ ಐಎಸ್ಐಎಸ್‌ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕರಾದ ಮುನಿರ್‌ ಖಾನ್‌ ತಿಳಿಸಿದ್ದಾರೆ.

ಶಂಕಿತ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry