‘ದಣಿವರಿಯದೇ ದುಡಿದ ಚಂದ್ರಶೇಖರ ಶ್ರೀ’

7
ಪುರದಲ್ಲಿ ಸಿದ್ಧವೀರ ಶಿವಾಚಾರ್ಯರ 41ನೇ ಸಂಸ್ಮರಣೋತ್ಸವ, ಸಾಮೂಹಿಕ ವಿವಾಹ

‘ದಣಿವರಿಯದೇ ದುಡಿದ ಚಂದ್ರಶೇಖರ ಶ್ರೀ’

Published:
Updated:
‘ದಣಿವರಿಯದೇ ದುಡಿದ ಚಂದ್ರಶೇಖರ ಶ್ರೀ’

ಹೂವಿನಹಡಗಲಿ: ‘ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ರಂಗದ ಪ್ರಗತಿಗಾಗಿ ದಣಿವರಿಯದೇ ದುಡಿದ ಲಿಂಗೈಕ್ಯ ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಸಮಾಜದ ಉನ್ನತಿಗೆ ಅಪಾರ ಕೊಡುಗೆ ನೀಡಿದ್ದಾರೆ’ ಎಂದು ಶ್ರೀಶೈಲ ಪೀಠದ ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಪುರ ಗ್ರಾಮದಲ್ಲಿ ಬುಧವಾರ ವಿಶ್ವಾರಾಧ್ಯರ ರಥೋತ್ಸವ, ಸಿದ್ಧವೀರೇಶ ಶಿವಾಚಾರ್ಯರ 41ನೇ ಸಂಸ್ಮರಣೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ಮಾತನಾಡಿ, ‘ಸಮಾಜಮುಖಿ ಕಾರ್ಯಕ್ರಮ ಸಂಘಟಿಸುವಲ್ಲಿ ಶ್ರೀಮಠವು ಮುಂಚೂಣಿಯಲ್ಲಿದೆ’ ಎಂದರು.

ಕಾಶಿ ಪೀಠದ ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಹೊನ್ನಾಳಿ ಹಿರೇಕಲ್ಮಠದ ಚನ್ನಮಲ್ಲಿಕಾರ್ಜುನ ಸ್ವಾಮೀಜಿ, ಮುಂಡರಗಿಯ ಅನ್ನದಾನೀಶ್ವರ ಸ್ವಾಮೀಜಿ, ಹರಪನಹಳ್ಳಿ ತೆಗ್ಗಿನಮಠದ ವರಸದ್ಯೋಜಾತ ಸ್ವಾಮೀಜಿ, ಕೊಟ್ಟೂರು ಚಾನುಕೋಟಿ ಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ನಾಗತಿ ಬಸಾಪುರದ ಗಿರಿರಾಜ ಹಾಲ ಸ್ವಾಮೀಜಿ, ಗವಿಮಠದ ಡಾ.ಹಿರಿಶಾಂತವೀರ ಶ್ರೀ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry