ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಗರಿಬೊಮ್ಮನಹಳ್ಳಿಯಲ್ಲಿ ನೀರಸ ಪ್ರತಿಕ್ರಿಯೆ

Last Updated 26 ಜನವರಿ 2018, 10:51 IST
ಅಕ್ಷರ ಗಾತ್ರ

ಹಗರಿಬೊಮ್ಮನಹಳ್ಳಿ: ಮಹದಾಯಿ ಯೋಜನೆ ಜಾರಿಗೊಳಿಸುವಂತೆ ವಿವಿಧ ಸಂಘಟನೆಗಳು ನೀಡಿದ್ದ ಬಂದ್‌ ಕರೆಗೆ ಪಟ್ಟಣದಲ್ಲಿ ಗುರುವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ಶಾಲೆ– ಕಾಲೇಜುಗಳು, ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಿದವು. ಮಾರುಕಟ್ಟೆ ವಹಿವಾಟಿನಲ್ಲಿ ಯಾವುದೆ ವ್ಯತ್ಯಾಸ ಕಂಡುಬರಲಿಲ್ಲ. ಬಸ್‌ ಸಂಚಾರವೂ ಎಂದಿನಂತೆಯೇ ಇತ್ತು.

ಕರವೇ ನಾರಾಯಣಗೌಡ ಬಣದ ಪದಾಧಿಕಾರಿಗಳು ತಾಲ್ಲೂಕು ಘಟಕದ ಅಧ್ಯಕ್ಷ ಎನ್‌.ಎಂ.ಗೌಸ್ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೈಕ್‌ ರ‍್ಯಾಲಿ ನಡೆಸಿದರು.

ಇದೇ ವೇಳೆ, ತಹಶೀಲ್ದಾರ್ ಕಚೇರಿಯ ಎದುರು ಧರಣಿ ನಡೆಸಿದರು. ಪ್ರಾಂತ ರೈತಸಂಘದ ತಾಲ್ಲೂಕು ಘಟಕದ ಕಾರ್ಯದರ್ಶಿ ಕೊಟಿಗೆ ಮಲ್ಲಿಕಾರ್ಜುನ ಮಾತನಾಡಿದರು.

ಸಿಪಿಎಂ ತಾಲ್ಲೂಕು ಘಟಕದ ಕಾರ್ಯದರ್ಶಿ ಎಸ್.ಜಗನ್ನಾಥ್ ಮಾತನಾಡಿದರು. ಕನ್ನಡಪರ ಸಂಘಟನೆಯ ಮುಖಂಡರಾದ ಸೈಯದ್ ಇರ್ಫಾನ್‌, ಕೆ.ಎಂ.ಮಂಜುನಾಥ, ಎಸ್.ನಾಗರಾಜ, ಟಿ.ರಾಜು, ಬಸವರಾಜ, ಕೆ.ಶಿವರಾಜ, ಡಿ.ಇಸ್ಮಾಯಿಲ್ ಭಾಗವವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT