ಸೋಮವಾರಪೇಟೆಯಲ್ಲೂ ಸಹಜ ಸ್ಥಿತಿ

7

ಸೋಮವಾರಪೇಟೆಯಲ್ಲೂ ಸಹಜ ಸ್ಥಿತಿ

Published:
Updated:
ಸೋಮವಾರಪೇಟೆಯಲ್ಲೂ ಸಹಜ ಸ್ಥಿತಿ

ಸೋಮವಾರಪೇಟೆ: ಕನ್ನಡಪರ ಸಂಘಟನೆಗಳು ಗುರುವಾರ ಕರೆ ನೀಡಿದ್ದ ಕರ್ನಾಟಕ ಬಂದ್‌ ಪಟ್ಟಣದಲ್ಲಿ ಯಾವುದೇ ಪರಿಣಾಮ ಬೀರಲಿಲ್ಲ.

ಎಂದಿನಂತೆಯೇ ಅಂಗಡಿ ಮುಂಗಟ್ಟುಗಳು, ಖಾಸಗಿ ಹಾಗೂ ಸರ್ಕಾರಿ ಶಾಲಾ ಕಾಲೇಜುಗಳು ತೆರೆದಿದ್ದವು. ಸಂತ ಜೋಸೆಫರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಮಾತ್ರ ಶಿಕ್ಷಣ ಸಂಸ್ಥೆಗೆ ರಜೆ ಘೋಷಿಸಿತ್ತು. ಬೆಳಿಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ಕೆಎಸ್ಆರ್‌ಟಿಸಿ ಬಸ್‌ಗಳು ಸಂಚರಿಸದ ಕಾರಣ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry