ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸಾಂಜ್ ವಿರುದ್ಧ ಬಂಧನ ವಾರಂಟ್ ಫೆ.6ಕ್ಕೆ ನಿರ್ಧಾರ

Last Updated 26 ಜನವರಿ 2018, 19:30 IST
ಅಕ್ಷರ ಗಾತ್ರ

ಲಂಡನ್: ವಿಕಿಲೀಕ್ಸ್‌ ಸಂಸ್ಥಾಪಕ ಜೂಲಿಯನ್ ಅಸಾಂಜ್ ವಿರುದ್ಧ ಹೊರಡಿಸಿರುವ ಬಂಧನ ವಾರಂಟ್‌ ಅನ್ನು ಕೈಬಿಡಬೇಕೇ ಬೇಡವೇ ಎಂಬ ಬಗ್ಗೆ ಕೋರ್ಟ್‌ ಫೆ.6ರಂದು ನಿರ್ಧರಿಸಲಿದೆ.

2012ರಲ್ಲಿ,‌ ಸ್ವೀಡನ್‌ನಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣವೊಂದರಲ್ಲಿ ಜೂಲಿಯನ್‌ ಹೆಸರು ಕೇಳಿಬಂದಿತ್ತು. ಆಗಿನಿಂದಲೂ ಅವರು ಇಲ್ಲಿನ ಈಕ್ವೆಡಾರ್‌ನ ದೂತಾವಾಸದಲ್ಲಿ ಆಶ್ರಯ ಪಡೆದಿದ್ದಾರೆ. ವಿಚಾರಣೆ ನಂತರ ತನಿಖೆ ಕೈಬಿಡಲಾಗಿತ್ತು. ಆದರೆ  ದೂತಾವಾಸ ಕಚೇರಿಯನ್ನು ಬಿಟ್ಟುಹೋಗಬಾರದು ಎಂದು ಷರತ್ತು ವಿಧಿಸಲಾಗಿತ್ತು.

ಈ ಆದೇಶ ಇನ್ನೂ ಚಾಲ್ತಿಯಲ್ಲಿ ಇರುವ ಕಾರಣ, ದೂತಾವಾಸ ಕಚೇರಿ ಬಿಟ್ಟು ಹೋದರೆ ಬಂಧಿಸುವ ಸಾಧ್ಯತೆ ಇದೆ. ಆದ್ದರಿಂದ ಇದನ್ನು ಕೈಬಿಡಬೇಕು ಎಂದು ಅವರು ಕೋರ್ಟ್‌ ಮೊರೆ ಹೋಗಿದ್ದಾರೆ.

ಅಮೆರಿಕ ಸೇನೆಗೆ ಸಂಬಂಧಿಸಿದ ದಾಖಲೆಗಳನ್ನು 2010ರಲ್ಲಿ ವಿಕಿಲೀಕ್ಸ್ ಮೂಲಕ ಸೋರಿಕೆ ಮಾಡಿರುವ ಆರೋಪವೂ ಇವರ ಮೇಲಿರುವ ಕಾರಣ, ಕೋರ್ಟ್‌ ಯಾವ ರೀತಿಯ ಆದೇಶ ಹೊರಡಿಸುತ್ತದೆ ಎಂಬುದನ್ನು ಕಾದುನೋಡಬೇಕಿದೆ ಎಂದಿದ್ದಾರೆ ತಜ್ಞರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT