ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: 41 ಸಾವು

7

ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: 41 ಸಾವು

Published:
Updated:
ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: 41 ಸಾವು

ಸೋಲ್‌: ‘ದಕ್ಷಿಣ ಕೊರಿಯಾದ ಮಿರ್ಯಾಂಗ್‌ನ ಆ‌ಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ಅನಾಹುತದಲ್ಲಿ 41 ಮಂದಿ ಸಾವನ್ನಪ್ಪಿದ್ದಾರೆ’ ಎಂದು ಯೊನ್‌ಹಾಪ್‌ ಸುದ್ದಿಸಂಸ್ಥೆ ವರದಿ ಮಾಡಿದೆ. ಕಳೆದೊಂದು ದಶಕದಲ್ಲಿ ದೇಶದಲ್ಲಿ ನಡೆದ ಅತ್ಯಂತ ಭೀಕರ ಅಗ್ನಿ ಅವಘಡ ಇದಾಗಿದೆ. ಇದರಿಂದ ದೇಶದಲ್ಲಿರುವ ‘ಸುರಕ್ಷತಾ ಮಾನದಂಡ’ದ ಬಗ್ಗೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

‘ಘಟನೆಯಲ್ಲಿ 70 ಮಂದಿ ಗಾಯಗೊಂಡಿದ್ದು, ಈ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಆರು ಮಹಡಿಯ ಸೆಜೊಂಗ್‌ ಆಸ್ಪತ್ರೆಯ ಮೊದಲ ಮಹಡಿಯಲ್ಲಿ ಶುಕ್ರವಾರ ಬೆಳಿಗ್ಗೆ 7.35ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತು. ನಂತರ ಕೆನ್ನಾಲಿಗೆ ಇಡೀ ಕಟ್ಟಡವನ್ನು ಆವರಿಸಿತು’ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಆಸ್ಪತ್ರೆಯ ಮುಖ್ಯ ಕಟ್ಟಡದಲ್ಲಿ 100 ಮಂದಿ ಹಾಗೂ ಇನ್ನೊಂದು ಕಟ್ಟಡದಲ್ಲಿ 90 ಮಂದಿಯಿದ್ದರು, ದುರಂತದಲ್ಲಿ ಸಾವನ್ನಪ್ಪಿದವರ ಗುರುತು ಇನ್ನಷ್ಟೇ ಗೊತ್ತಾಗಬೇಕಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry