ಕಾಮಗಾರಿ ಪರಿಶೀಲಿಸಿ

7

ಕಾಮಗಾರಿ ಪರಿಶೀಲಿಸಿ

Published:
Updated:

ಶ್ರವಣಬೆಳಗೊಳದಲ್ಲಿ ಫೆಬ್ರುವರಿ ತಿಂಗಳಲ್ಲಿ ನಡೆಯಲಿರುವ ಗೊಮ್ಮಟೇಶ್ವರನ ಮಹಾಮಸ್ತಕಾಭಿಷೇಕದ ಪೂರ್ವಸಿದ್ಧತೆ ಕುಂಟುತ್ತಾ, ತೆವಳುತ್ತಾ ಸಾಗುತ್ತಿದೆ. ರಾಜ್ಯ ಸರ್ಕಾರದ ಬೊಕ್ಕಸದಿಂದ ಬಿಡುಗಡೆಗೊಳ್ಳುವ ಪ್ರತಿಯೊಂದು ಪೈಸೆಯೂ ಸದ್ವಿನಿಯೋಗವಾಗಬೇಕು ಎಂಬುದು ಶ್ರವಣಬೆಳಗೊಳದ ನಾಗರಿಕರ ಆಶಯವಾಗಿದೆ. ಆದರೆ ಇಲ್ಲಿ ಕೆಲವು ಕಾಮಗಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಜಿಲ್ಲಾಧಿಕಾರಿ ಮತ್ತು ವಿಶೇಷಾಧಿಕಾರಿ ಖುದ್ದಾಗಿ ಎಲ್ಲ ಸಿದ್ಧತೆಗಳನ್ನು ಪರಿಶೀಲಿಸಬೇಕು. ಕಾಮಗಾರಿ ಕಳಪೆಯಾಗದಂತೆ ಎಚ್ಚರವಹಿಸಬೇಕು.

ವಿಶ್ವದ ಗಮನ ಸೆಳೆಯುವ ಮಹಾಮಸ್ತಕಾಭಿಷೇಕ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರುವಂತೆ ನೋಡಿಕೊಳ್ಳುವ ಜವಾಬ್ದಾರಿ ಸರ್ಕಾರದ ಮೇಲೆ ಇದೆ.

–ಕೆ.ಪಿ. ಗಿರೀಶ, ಶ್ರವಣಬೆಳಗೊಳ

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry