ಐಪಿಎಲ್: ಹರಾಜು ಇಂದಿನಿಂದ

7

ಐಪಿಎಲ್: ಹರಾಜು ಇಂದಿನಿಂದ

Published:
Updated:
ಐಪಿಎಲ್: ಹರಾಜು ಇಂದಿನಿಂದ

ಬೆಂಗಳೂರು: ನಗರದಲ್ಲಿ ಶನಿವಾರ ಮತ್ತು ಭಾನುವಾರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ–20 ಕ್ರಿಕೆಟ್‌ ಟೂರ್ನಿಯ 11ನೇ ಆವೃತ್ತಿಗೆ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ.

ಎರಡು ದಿನಗಳ ಕಾಲ ನಡೆಯುವ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 578 ಆಟಗಾರರಿಗೆ ಅವಕಾಶ ಸಿಗಲಿದೆ. ಒಟ್ಟು ಎಂಟು ಫ್ರ್ಯಾಂಚೈಸ್‌ಗಳು ಆಟಗಾರರನ್ನು ತಮ್ಮ ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಿವೆ.

2013ರಲ್ಲಿ ನಡೆದಿದ್ದ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಎರಡು ವರ್ಷ ಅಮಾನತು ಶಿಕ್ಷೆ ಅನುಭವಿಸಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ರಾಜಸ್ಥಾನ ರಾಯಲ್ಸ್‌ ತಂಡಗಳು ಈ ಬಾರಿ ಮರಳಲಿವೆ. ಹೋದ ವರ್ಷ ಇದ್ದ ಗುಜರಾತ್ ಲಯನ್ಸ್‌ ಮತ್ತು ರೈಸಿಂಗ್ ಪುಣೆ ಸೂಪರ್ ಜೈಂಟ್ಸ್‌ ತಂಡಗಳು ಈ ಬಾರಿ ನಿರ್ಗಮಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry