ತಮ್ಮನಿಗೆ ಕ್ಷೇತ್ರ ಬಿಟ್ಟುಕೊಡುವೆ: ರಮೇಶ

7

ತಮ್ಮನಿಗೆ ಕ್ಷೇತ್ರ ಬಿಟ್ಟುಕೊಡುವೆ: ರಮೇಶ

Published:
Updated:

ಬೆಳಗಾವಿ: ‘ಸಹೋದರ ಲಖನ್‌ ಜಾರಕಿಹೊಳಿಯನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲು ತೀರ್ಮಾನಿಸಿದ್ದೇನೆ. ಇದಕ್ಕಾಗಿ ನನ್ನ ಗೋಕಾಕ ಕ್ಷೇತ್ರವನ್ನು ಅವರಿಗೆ ಬಿಟ್ಟುಕೊಡಲು ಸಿದ್ಧನಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

‘ಲಖನ್‌ ಅವರನ್ನು ಚುನಾವಣೆಗೆ ಇಳಿಸುವುದು ಖಚಿತ. ಆದರೆ, ಯಾವ ಕ್ಷೇತ್ರದಿಂದ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಯಮಕನಮರಡಿ ಕ್ಷೇತ್ರದಿಂದ ಕಣಕ್ಕಿಳಿಸಲು ಬಯಸಿದ್ದೆ. ಆದರೆ, ಪಕ್ಷದ ಹಿರಿಯ ಮುಖಂಡರು ಒಪ್ಪಿಲ್ಲ. ಹೀಗಾಗಿ, ಬೇರೆ ಕ್ಷೇತ್ರದ ಹುಡುಕಾಟದಲ್ಲಿದ್ದೇವೆ’ ಎಂದು ಶುಕ್ರವಾರ ಅವರು ಸುದ್ದಿಗಾರರಿಗೆ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry