ಅಸಂಘಟಿತ ಕಾರ್ಮಿಕರಿಗೆ ಸುರಕ್ಷತಾ ಸಂಖ್ಯೆ

7

ಅಸಂಘಟಿತ ಕಾರ್ಮಿಕರಿಗೆ ಸುರಕ್ಷತಾ ಸಂಖ್ಯೆ

Published:
Updated:

ನವದೆಹಲಿ: ಅಸಂಘಟಿತ ಕಾರ್ಮಿಕ ವಲಯವನ್ನು ಸಾಮಾಜಿಕ ಸುರಕ್ಷತಾ ಯೋಜನೆ ವ್ಯಾಪ್ತಿಗೆ ತರುವ ಉದ್ದೇಶದಿಂದ ‘ಅಸಂಘಟಿತ ಕಾರ್ಮಿಕರ ಸೂಚ್ಯಂಕ ಸಂಖ್ಯೆ ಕಾರ್ಡ್‌ (ಯುಡಬ್ಲ್ಯುಐಎನ್‌) ನೀಡಲು ಕಾರ್ಮಿಕ ಸಚಿವಾಲಯ ಮುಂದಾಗಿದೆ.

ಈ ವಲಯದ 47 ಕೋಟಿ ಕಾರ್ಮಿಕರ ನೋಂದಣಿ ಪ್ರಕ್ರಿಯೆಯು ಏಪ್ರಿಲ್‌ನಿಂದ ಆರಂಭವಾಗಲಿದೆ. ಮುಂದಿನ ಹಣಕಾಸು ವರ್ಷದ ಅಂತ್ಯದೊಳಗೆ ಅಂದರೆ 2019ರ ಸಾರ್ವತ್ರಿಕ ಚುನಾವಣೆಗೂ ಮುನ್ನವೇ ಕಾರ್ಮಿಕರ ನೋಂದಣಿ, ಕಾರ್ಡ್‌ ನೀಡುವ ಪ್ರಕ್ರಿಯೆ ಪೂರ್ಣಗೊಳಿಸುವ ಯೋಜನೆ ಹೊಂದಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾರ್ಮಿಕರ ಭವಿಷ್ಯ ನಿಧಿಯ ವಿವಿಧ ಸಾಮಾಜಿಕ ಸುರಕ್ಷತಾ ಯೋಜನೆಗಳನ್ನು ನೀಡಲು ಈ ಕಾರ್ಡ್‌ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ಈ ಕಾರ್ಡ್‌ಗೆ ಆಧಾರ್‌ ಸಂಖ್ಯೆಯನ್ನೂ ಜೋಡಿಸಲಾಗುವುದು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry