ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಮೇಲೆ ಹರಿಯುತ್ತಿದೆ ಒಳಚರಂಡಿ ನೀರು

Last Updated 26 ಜನವರಿ 2018, 19:48 IST
ಅಕ್ಷರ ಗಾತ್ರ

ಬೆಂಗಳೂರು: ಮಹದೇವಪುರದ ದೊಡನೆಕ್ಕುಂದಿ ವಾರ್ಡ್‍ನ ಎಇಸಿಎಸ್ ಲೇಔಟ್‌ ಮುಖ್ಯರಸ್ತೆಯಲ್ಲಿ ಒಳಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದೆ.

ಇದರಿಂದ ದುರ್ವಾಸನೆ ಬರುತ್ತಿದೆ. ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಓಡಾಡುವ ಸ್ಥಿತಿ ಇದೆ ಎಂದು ಸ್ಥಳೀಯರು ಅಳಲು ತೋಡಿಕೊಂಡರು.

ಇಲ್ಲಿನ ಒಳಚರಂಡಿ ವ್ಯವಸ್ಥೆಯನ್ನು 30 ವರ್ಷಗಳ ಹಿಂದೆ ನಿರ್ಮಿಸಲಾಗಿದೆ. ಸರಿಯಾಗಿ ಸ್ವಚ್ಛಗೊಳಿಸದ್ದಕ್ಕೆ ಕೊಳಚೆ ನೀರು ಸರಾಗವಾಗಿ ಹರಿಯುತ್ತಿಲ್ಲ. ಕುಡಿಯುವ ನೀರಿಗೂ ತೊಂದರೆಯಾಗಿದೆ. ಬಿಬಿಎಂಪಿ ವತಿಯಿಂದ ಈ ಭಾಗದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ ಎಂದು ನಿವಾಸಿ ಲಕ್ಷ್ಮಣ್ ರಾಜು ಅಸಮಾಧಾನ ವ್ಯಕ್ತಪಡಿಸಿದರು.

ದೊಡ್ಡನೆಕ್ಕುಂದಿ ವಾರ್ಡ್‌ನಲ್ಲಿ ಒಳಚರಂಡಿ ವ್ಯವಸ್ಥೆ ಅಸಮರ್ಪಕವಾಗಿದೆ. ಅದರ ಅಭಿವೃದ್ಧಿಗೆ ₹ 2.5 ಕೋಟಿ ವೆಚ್ಚದ ಯೋಜನೆ ರೂಪಿಸಿ ಜಲಮಂಡಳಿಗೆ ಎರಡು ವರ್ಷಗಳ ಹಿಂದೆಯೇ ಪ್ರಸ್ತಾವ ಸಲ್ಲಿಸಿದ್ದೆವು. ಅಧಿಕಾರಿಗಳು ಹಾಗೂ ಮೇಯರ್ ಇದಕ್ಕೆ ಇನ್ನೂ ಸ್ಪಂದಿಸಿಲ್ಲ ಎಂದು ಪಾಲಿಕೆ ಸದಸ್ಯೆ ಶ್ವೇತಾ ವಿಜಯ್‌ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.

‘ಪಾಲಿಕೆಯ ಕಾಂಗ್ರೆಸ್ ಸದಸ್ಯರ ವಾರ್ಡ್‍ಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವ ಮೇಯರ್, ಬಿಜೆಪಿ ಸದಸ್ಯರ ವಾರ್ಡ್‌ಗಳಿಗೆ ಕಡಿಮೆ ಅನುದಾನ ನೀಡಿ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ’ ಎಂದು ದೂರಿದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT