'ಎಡಕಲ್ಲು ಗುಡ್ಡದ ಮೇಲೆ’ ಖ್ಯಾತಿಯ ನಟ ಚಂದ್ರಶೇಖರ್ ವಿಧಿವಶ

7

'ಎಡಕಲ್ಲು ಗುಡ್ಡದ ಮೇಲೆ’ ಖ್ಯಾತಿಯ ನಟ ಚಂದ್ರಶೇಖರ್ ವಿಧಿವಶ

Published:
Updated:
'ಎಡಕಲ್ಲು ಗುಡ್ಡದ ಮೇಲೆ’ ಖ್ಯಾತಿಯ ನಟ ಚಂದ್ರಶೇಖರ್ ವಿಧಿವಶ

ಬೆಂಗಳೂರು: ಹಿರಿಯ ನಟ,‘ಎಡಕಲ್ಲು ಗುಡ್ಡದ ಮೇಲೆ’ ಚಿತ್ರದ ಖ್ಯಾತಿಯ ಕೂದುವಳ್ಳಿ ಚಂದ್ರಶೇಖರ್ ಅವರು ಹೃದಯಾಘಾತದಿಂದ ಕೆನಡಾದಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಾಲಿನಲ್ಲಿ ರಕ್ತ ಹೆಪ್ಪುಗಟ್ಟಿ, ಕ್ರಮೇಣ ಆ ಸಮಸ್ಯೆ ಹೆಚ್ಚಾಗಿತ್ತು. ಚಂದ್ರಶೇಖರ್​ ಅವರು ಪತ್ನಿ ಶೀಲಾ ಮತ್ತು ಮಗಳು ತಾನಿಯಾರನ್ನ ಅಗಲಿದ್ದಾರೆ.

ಬಾಲ ನಟನಾಗಿ ಚಿತ್ರರಂಗ ಪ್ರವೇಶಿಸಿದ್ದ ಚಂದ್ರಶೇಖರ್‌, ವಿಷ್ಣುವರ್ಧನ್, ರಾಜ್‌ಕುಮಾರ್‌ ಸೇರಿದಂತೆ ಹಲವು ನಟರೊಂದಿಗೆ ನಟಿಸಿದ್ದರು.ಪುಟ್ಟಣ್ಣ ಕಣಗಾಲ್ ಗರಡಿಯಲ್ಲಿ ಅರಳಿದ ಪ್ರತಿಭೆ ಈ ಚಂದ್ರಶೇಖರ್.

ಶಿವಲಿಂಗ, ಅಸ್ತಿತ್ವ, ರೋಸ್, ಕಾರಂಜಿ, ಜೀವ, ಪೂರ್ವಾಪರ, ಮಾನಸ ಸರೋವರ ಸೇರಿದಂತೆ 40 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಚಂದ್ರಶೇಖರ್ ಅವರಿಗೆ ಖ್ಯಾತಿ ತಂದುಕೊಟ್ಟಿದ್ದು ಎಡಕಲ್ಲು ಗುಡ್ಡದ ಮೇಲೆ ಚಿತ್ರ.

3 ಗಂಟೆ 30 ದಿನ 30 ಸೆಕೆಂಡ್ ಅವರು ನಟಿಸಿದ ಕೊನೆಯ ಸಿನಿಮಾ ಆಗಿದ್ದು, ಕೆಲವು ದಿನಗಳ ಹಿಂದಷ್ಟೇ ಸಿನಿಮಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಬಳಿಕ ಬೆಂಗಳೂರಿನಿಂದ ಕೆನಡಾಗೆ ತೆರಳಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry