₹316 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ

7

₹316 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ

Published:
Updated:
₹316 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ

ಜೇವರ್ಗಿ: ‘ತಾಲ್ಲೂಕಿನ ಗ್ರಾಮೀಣ ರಸ್ತೆ ಗಳ ಅಭಿವೃದ್ಧಿಗೆ ನಾಲ್ಕೂವರೆ ವರ್ಷದ ಅವಧಿಯಲ್ಲಿ ₹316 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ. ರಸ್ತೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಲಮಿತಿಯಲ್ಲಿ ಪೂರ್ಣಗೊಳ್ಳಲಿದೆ’ ಎಂದು ಶಾಸಕ ಡಾ.ಅಜಯಸಿಂಗ್ ಹೇಳಿದರು.

ಪಟ್ಟಣದ ತಾಲ್ಲೂಕು ಕ್ರೀಡಾಂಗಣ ದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಶುಕ್ರವಾರ ಆಯೋಜಿಸಿದ್ದ 69ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ದೇಶದಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ದಿನಾಚರಣೆ ಎರಡು ರಾಷ್ಟ್ರೀಯ ಹಬ್ಬಗಳನ್ನು ಆಚರಿಸಲಾಗುತ್ತಿದೆ. ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶಕ್ಕೆ ವಿಶ್ವಕ್ಕೆ ಮಾದರಿಯಾದ ಸಂವಿಧಾನ ರಚಿಸಿದ್ದಾರೆ’ ಎಂದು ಹೇಳಿದರು.

ಹೈದರಾಬಾದ್ ಕರ್ನಾಟಕ ವಿಮೋಚನಾ ಚಳಿವಳಿ ಹೋರಾಟಗಾರ ರಾದ ಶಾಮರಾವ್ ಕುಲಕರ್ಣಿ ಕೋಣಶಿರಸಗಿ, ಶಂಕ್ರಪ್ಪ ಸಾಹು ಹುಗ್ಗಿ ಅವರನ್ನು ಸನ್ಮಾನಿಸಲಾಯಿತು. ನಂತರ ಪಟ್ಟಣದ ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಮಿನಿ ವಿಧಾನಸೌಧ ಆವರಣದಲ್ಲಿ ತಹಶೀಲ್ದಾರ್ ಬಸಲಿಂಗಪ್ಪ ನಾಯಿಕೋಡಿ ಧ್ವಜಾರೋಹಣ ನೆರವೇರಿಸಿದರು. ಸರಿಗಮಪ ವಿನ್ನರ್ ಸುನಿಲ ಗುಜಗೊಂಡ, ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ, ಕಲಬುರ್ಗಿ

ಪಾಲಿಕೆ ಮೇಯರ್ ಶರಣಕುಮಾರ ಮೋದಿ, ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ದೇವಕ್ಕಿ ಹಿರೇಮಠ, ಸದಸ್ಯರಾದ ಶಾಂತಪ್ಪ ಕೂಡಲಗಿ, ರೇವಣಸಿದ್ದಪ್ಪ ಸಂಕಾಲಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಚಂದಮ್ಮ ಇಟಗಾ, ಪುರಸಭೆ ಅಧ್ಯಕ್ಷೆ ಮಲ್ಲಮ್ಮ ಅವಂಟಿ, ಉಪಾಧ್ಯಕ್ಷೆ ರೇಣುಕಾ ಗುತ್ತೇದಾರ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಅಬ್ದುಲ್ ರಜಾಕ್ ಮನಿಯಾರ್, ಚಂದ್ರಶೇಖರ ಹರನಾಳ, ಸಿದ್ದಲಿಂಗರೆಡ್ಡಿ ಪಾಟೀಲ ಇಟಗಿ, ರುಕುಂ ಪಟೇಲ್ ಇಜೇರಿ, ಶೌಕತ್ ಅಲಿ ಆಲೂರ, ರಾಜಶೇಖರ ಸೀರಿ ಇದ್ದರು. ವಿ.ಬಿ.ಹಿರೇಗೌಡ ನಿರೂಪಿಸಿದರು.

* * 

ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳನ್ನು ಗುರುತಿಸುವ ಕಾರ್ಯ ನಡೆಸಬೇಕು. ಮಹಿಳೆಯರಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಬೇಕು

ಯಶ್,ಚಲನಚಿತ್ರ ನಟ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry